ಅಂಕಲಗಿ ಪಟ್ಟಣದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ..

ಅಂಕಲಗಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ದಸರಾ ನಿಮಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಅ.22 ಹಾಗೂ 23 ರಂದು..

ಬೆಳಗಾವಿ: ಗೋಕಾಕ ತಾಲೂಕಿನ ಅಂಕಲಗಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ದೇವಿ ದೇವಸ್ಥಾನದ ಕಮಿಟಿ ವತಿಯಿಂದ ಪ್ರತಿ ವರ್ಷದಂತೆ ವಿಜಯದಶಮಿ ನಿಮಿತ್ಯ ಅಕ್ಟೋಬರ್ 22 ಹಾಗೂ 24 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಅ.22 ರಂದು ರಾತ್ರಿ 8 ಗಂಟೆಗೆ ಡೊಳ್ಳಿನ ವಾಲಗ, ಡೊಳ್ಳಿನ ಪದಗಳು ಹಾಗೂ ಇನ್ನಿತರ ಕಾರ್ಯಕ್ರಮಗಳು ಜರುಗಲಿವೆ.

ಅದೇ ರೀತಿಯಲ್ಲಿ ಸೋಮವಾರ ಅ.23 ರಂದು ಸಂಜೆ 5 ಗಂಟೆಗೆ ಅಂಕಲಗಿ ಶ್ರೀ ಮಹಾಲಕ್ಷ್ಮೀ ದೇವಿ ಹಾಗೂ ಹಣಬರಟ್ಟಿ ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವತೆಗಳು ಪಲ್ಲಕ್ಕಿಯೊಂದಿಗೆ ಅಗ್ನಿ ಹಾಯಲಿದ್ದು,
ತದ ನಂತರ ಅನ್ನ ಪ್ರಸಾದದ ವ್ಯವಸ್ಥೆ ಇರಲಿದೆ.

ಸಮಸ್ತ ಭಕ್ತಾಧಿಗಳು ದೇವಿ ದರ್ಶನ ಪಡೆದು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೇವಿ ಕೃಪೆಗೆ ಪಾತ್ರರಾಗಬೇಕೆಂದು ಅಂಕಲಗಿಯ ಶ್ರೀ ಮಹಾಲಕ್ಷ್ಮೀ ದೇವಿ ದೇವಸ್ಥಾನದ ಪಂಚ ಕಮಿಟಿ ವತಿಯಿಂದ ಲಕ್ಕಪ್ಪಾ ಕರೆಪ್ಪ ಪೂಜೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.