ಅಂಬೇಡ್ಕರ ಶಕ್ತಿ ಸಂಘಟನೆಯಿಂದ ತಾಪಂ ಎದುರಿಗೆ ತಮಟೆ ಚಳುವಳಿ.

ಅಂಬೇಡ್ಕರ ಶಕ್ತಿ ಸಂಘಟನೆಯಿಂದ ತಾಪಂ ಎದುರಿಗೆ ತಮಟೆ ಚಳುವಳಿ.

ಪಿಡಿಒಗಳ ಮೇಲೆ ಕ್ರಮ ಕೈಗೊಳ್ಳದೇ ಇರುವುದಕ್ಕೆ ತಮಟೆ ಪ್ರತಿಭಟನೆ.

ಬೆಳಗಾವಿ : ತಾಲೂಕಿನ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಾದ ಜಿ ಐ ಬರಗಿ, ಉಷಾ ಹಾಗೂ ರಾನಮ್ಮ ಮಾದರ ಇವರುಗಳ ಮೇಲೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ನಗರದ ಡಾ ಬಿ ಆರ್ ಅಂಬೇಡ್ಕರ ಶಕ್ತಿ ಸಂಘಟೆಯಿಂದ ಶುಕ್ರವಾರ ದಿನಾಂಕ 07/03/2025ರಂದು ಮಧ್ಯಾಹ್ನ ಹನ್ನೆರಡು ಗಂಟೆಗೆ ತಮಟೆ ಬಾರಿಸುವ ಮೂಲಕ ಪ್ರತಿಭಟನೆ ಮಾಡುವದಾಗಿ ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷರಾದ ಲಕ್ಷ್ಮಣ ದಶರಥ ಕೋಲಕಾರ ಅವರು ತಿಳಿಸಿದ್ದಾರೆ.

2024 ರಿಂದ 2025ರ ಇಲ್ಲಿವರೆಗೆ ಬೆಳಗಾವಿ ತಾಲೂಕಿನ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಾದ ಜಿ ಐ ಬರ್ಗಿ, ಉಷಾ, ಹಾಗೂ ರಾಣಮ್ಮ ಮಾದರ ಎಂಬುವವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು, ಸಾರ್ವಜನಿಕರಿಗೆ, ಸರ್ಕಾರಕ್ಕೆ, ಸರ್ಕಾರದ ರಾಜಸ್ವದ ಖಜಾನೆಗೆ ಸಾಕಷ್ಟು ನಷ್ಟ ಮಾಡಿದ್ದಾರೆ ಎಂದು ದಾಖಲೆ ನೀಡಿ, ಇವರುಗಳ ಮೇಲೆ ಕ್ರಮ ಜರುಗಿಸಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅವರಿಗೆ 2024 ರಲ್ಲಿಯೇ ಸೂಕ್ತ ಕ್ರಮ ಜರುಗಿಸುವಂತೆ ಅರ್ಜಿ ಸಲಿಸಿದ್ದೆ.

ಈ ಅರ್ಜಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದರು, ಇಲ್ಲಿವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಆದಕಾರಣ ಈ ಅರ್ಜಿಗೆ ಸಂಬಂಧಿಸಿದಂತೆ ಬೆಳಗಾವಿ ತಾಲೂಕು ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮೇಲೆ ಕ್ರಮ ಆಗಬೇಕೆಂದು ಡಾ ಬಿ ಆರ್ ಅಂಬೇಡ್ಕರ ಶಕ್ತಿ ಸಂಘಟನೆಯಿಂದ ತಮಟೆ ಪ್ರತಿಭಟನೆ ಕೈಗೊಳ್ಳುತ್ತಿದ್ದೆವೆ ಎಂಬ ಮಾಹಿತಿ ನೀಡಿದ್ದಾರೆ.

ವರದಿ ಪ್ರಕಾಶ್ ಬಸಪ್ಪ ಕುರಗುಂದ..