ಅಕ್ಟೋಬರ್ 11ರಂದು, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆ…

ಅಕ್ಟೋಬರ್ 11ರಂದು, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆ..

ಬೆಳಗಾವಿ,: ಅ.05: ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗದ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಇಲಾಖಾ ಮುಖ್ಯಸ್ಥರುಗಳ ಉಪಸ್ಥಿತಿಯಲ್ಲಿ ಅಕ್ಟೋಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸದರಿ ಕುಂದು ಕೊರತೆ ಸಭೆಗೆ ಬೆಳಗಾವಿ ಜಿಲ್ಲೆಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮುಖಂಡರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲು ಹಾಗೂ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಆಗಮಿಸಿಬೇಕು ಎಂದು ಸಮಾಜ ಕಲ್ಯಾಣ ಜಂಟಿ ನಿರ್ದೇಶಕರಾದ ಲಕ್ಷ್ಮಣ ಬಬಲಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ವರದಿ ಪ್ರಕಾಶ ಕುರಗುಂದ..