ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ..

ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ..

ಪರಿಶಿಷ್ಟರನ್ನು ಸಮಾಜದ‌‌ ಮುನ್ನೆಲೆಗೆ ತರುವ ಕಾರ್ಯವಾಗಬೇಕು..

ಪಿ.ಎಂ.ನರೇಂದ್ರ‌ಸ್ವಾಮಿ..

ಬೆಳಗಾವಿ : ನ.16: ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕಲು, ದುರ್ಬಲ ವರ್ಗಕ್ಕೆ ಉತ್ತಮವಾದಂತಹ ಯೋಜನೆ ನಿರ್ಮಿಸುವುದರ ಮೂಲಕ ಪರಿಶಿಷ್ಟರನ್ನು ಸಮಾಜದ‌ ಮುನ್ನೆಲೆಗೆ ತರಬಹುದಾಗಿದೆ. ಅಧಿಕಾರಿಗಳು ಇದನ್ನು ಅರಿತುಕೊಂಡು ಶ್ರಮಿಸಬೇಕು ಎಂದು ಕರ್ನಾಟಕ ವಿಧಾನ ಮಂಡಳ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ತಿಳಿಸಿದರು.

ಬೆಳಗಾವಿ ಸುವರ್ಣ‌ಸೌಧದಲ್ಲಿ ಶನುವಾರ(ನ.16) ಜರುಗಿದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಯೋಜನೆಗಳು ಮತ್ತು ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗಾಗಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸಲಾಗಿದ್ದು, ಇಲಾಖಾ ಅನುದಾನದಲ್ಲಿ‌ ನಿರ್ದಿಷ್ಟಪಡಿಸಿದ ಅನುದಾನವನ್ನು ಕಾಲಮಿತಿ ಒಳಗಾಗಿ ವೆಚ್ಚ ಮಾಡುವುದರ ಜೊತೆಗೆ ಇಲಾಖೆ ಅನುದಾನದಲ್ಲಿ ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನದ‌ ಸದ್ಬಳಕೆ ಆಗಬೇಕು. ಸರ್ಕಾರ ನೀಡಿದ ಅನುದಾನ ಅಪವ್ಯಯವಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಾಲೆ ಸೇರಿದಂತೆ ವಿವಿಧ ಸ್ವತ್ತುಗಳ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ‌ ಹಾಗೂ ಪರಿಶಿಷ್ಟ ಪಂಗಡಗಳ ಕುಟುಂಬಗಳ‌ ಸಂಖ್ಯೆಗೆ ಅನುಗುಣವಾಗಿ ವೈಯಕ್ತಿಕ ಶೌಚಾಲಯಗಳ‌ ನಿರ್ಮಾಣಕ್ಕೆ ಕ್ರಮ‌ ವಹಿಸಬೇಕು.

ಜಲ ಜೀವನ‌ ಮೀಷನ್ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪ.ಪಂಗಡಗಳ ಕಾಲನಿಯಲ್ಲಿನ‌ ಪ್ರತಿಯೊಂದು ಮನೆಗೂ ನಳ ಸಂಪರ್ಕ ಒದಗಿಸಿ ನೀರು ಒದಗಿಸಬೇಕು. ಈ‌ ಕುರಿತು ಸಮಾಜ‌ ಕಲ್ಯಾಣ ಇಲಾಖೆ ಅಧಿಕಾರಿಗಳು‌ ಖುದ್ದಾಗಿ ಭೇಟಿ‌ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿ ಕಾಮಗಾರಿಗಳಲ್ಲಿ ಯಾವುದೇ ಲೋಪಗಳು ಆಗದಂತೆ ನಿಗಾ ವಹಿಸುವದರ ಜೊತೆಗೆ ಈ ಯೋಜನೆಯಡಿ ಅಳವಡಿಸಲಾಗುವ ಪೈಪಗಳ ಗುಣಮಟ್ಟವನ್ನು ಪರೀಶಿಲಿಸಬೇಕು. ಈ ಕುರಿತು ನೋಡೆಲ್‌ ಅಧಿಕಾರಿಗಳನ್ನು ನೇಮಿಸಿ ಪರಿಶೀಲಿಸಲು ಸೂಚನೆ‌ ನೀಡಿದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಕೆ.ಡಿ.ಪಿ‌. ಪ್ರಗತಿ ಪರಿಶೀಲನಾ ಸಭೆಯಲ್ಲಿ‌ ಜಲ ಜೀವನ ಮಿಷನ ಯೊಜನೆ ಕುರಿತು ಪ್ರಗತಿ ಪರಿಶೀಲನೆಯಾಗಬೇಕು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ‌ ಪರಿಶಿಷ್ಟ ವರ್ಗಗಳ‌ ಕಲ್ಯಾಣ ಅಧಿಕಾರಿಗಳು ಈ‌ ಕುರಿತು ನಿಗಾ ವಹಿಸುವಂತೆ ನರೇಂದ್ರಸ್ವಾಮಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಇರುವ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಅಪೌಷ್ಟಿಕತೆ ನಿವಾರಣೆಗೆ ಮುಂದಾಗಬೇಕು. ಅದೇ ರೀತಿ ಜಿಲ್ಲೆಯಲ್ಲಿ ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವ ಯೋಜನೆಯಡಿ ನಿವೇಶನ ಹಾಗೂ ವಸತಿ ಇಲ್ಲದ ದೇವದಾಸಿಯರನ್ನು ಗುರುತಿಸಿ ಅವರಿಗೆ ಸಮರ್ಪಕವಾಗಿ ಪುನರ್ವಸತಿ ಕಲ್ಪಿಸುವ ಕಾರ್ಯವಾಗಬೇಕು. ಈ ಕಾರ್ಯದಲ್ಲಿ ಜಿಲ್ಲಾಡಳಿತದೊಂದಿಗೆ ಸಮಾಜ‌ ಕಲ್ಯಾಣ ಹಾಗೂ ಮಹಿಳಾ‌ ಇಲಾಖೆ‌ಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗಾಗಿ ಜಾರಿಯಲ್ಲಿರುವ ಸರಕಾರದ ಯೋಜನೆ ಹಾಗೂ ಸವಬಲಭ್ಯಗಳು ದೊರಕಿಸಿ ಅವರನ್ನು ಕೂಡ ಸಮಾಜದ ಮುಖ್ಯವಾಹಿನಿಗೆ ತರುವಂತಹ‌ ಕಾರ್ಯವಾಗಬೇಕು.

ಜಾತಿ ನಿಂದನೆ‌‌ ಪ್ರಕರಣಗಳನ್ನು ಗಂಭಿರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಜರುಗಿಸುವಂತೆ ಸೂಚನೆ‌ ನೀಡಿದರು. ಸುಳ್ಳು ಜಾತಿ ಪ್ರಮಾಣ‌ ಪತ್ರ ಪಡೆದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗಾಗಿ ಇರುವ ಯೋಜನೆಗಳನ್ನು‌ ದುರುಪಯೋಗ ಪಡೆಸಿಕೊಂಡವರ ವಿರುದ್ಧ ಕಠಿಣ ಕ್ರಮ ಜರುಗಿಸಲು ತಿಳಿಸಿದರು.

ನಗರಾಭಿವೃದ್ಧಿ ಇಲಾಖೆ‌ ಹಾಗೂ ಮಹಾನಗರ ಪಾಲಿಕೆಗಳ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಹೆಚ್ಚಿನ‌ ಅನುದಾನವನ್ನು ಶಿಕ್ಷಣ‌ ಕ್ಷೇತ್ರಕ್ಕೆ ಮೀಸಲಿಡಲು ತಿಳಿಸಿದರು. ಅದರಲ್ಲೂ ಹೆಣ್ಣು ಮಕ್ಕಳು ಶಿಕ್ಷಣದಿಂದ‌ ವಂಚಿತರಾಗದಂತೆ ಎಲ್ಲ‌ ಸೌಲಭ್ಯಗಳನ್ನು ಒದಗಿಸಲು ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ:

ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ‌ಯ ಗಂಭೀರತೆಯನ್ನು ಅರಿಯದೆ ಸಭೆಗೆ ಗೈರಾದ
ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಸಮಿತಿಯ ಅಧ್ಯಕ್ಷರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಸೂಚನೆ ನೀಡಿದರು.

ಶಾಸಕರು ಹಾಗೂ ಸಮಿತಿ ಸದಸ್ಯರಾದ ಎನ್.ರವಿಕುಮಾರ ಅವರು‌ ಮಾತನಾಡಿ ಜಿಲ್ಲೆಯಲ್ಲಿ ಗ್ರಾಮ‌ ಪಂಚಾಯತಗಳಲ್ಲಿ ಖಾಲಿ ಇರುವ ಗ್ರೂಪ ಡಿ ಹುದ್ದೆಗಳ ಕುರಿತು ಮಾಹಿತಿ ಪಡೆದರು.

ಸ್ವಚ್ಛ ಭಾರತ ಮಿಷನ ಯೋಜನೆಯಡಿ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಅನಹದಾನ ಬಿಡುಗಡೆಯಾಗುತ್ತಿದ್ದು ಜಿಲ್ಲೆಯ ಪ.ಜಾತಿ, ಪ.ಪಂಗಡಗಳ ಕುಟುಂಬಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಬೇಕು. ಈ ಯೋಜನೆಯಡಿ ಮನೆಗಳಿಗೆ ಶುದ್ಧ ಕುಡಿಯುವ‌ ನೀರನ್ನು ಪೂರೈಸಬೇಕು.

ಸಭೆಯಲ್ಲಿ ಸಮಿತಿ ಸದಸ್ಯರುಗಳಾದ ಬಸವರಾಜ ಮತ್ತಿಮುಡು, ಶಾಂತಾರಾಮ‌ ಸಿದ್ಧಿ, ಸಮಾಜ ಕಲ್ಯಾಣ ಇಲಾಖೆಯ ರಾಕೇಶ್ ಕುಮಾರ, ಬೆಳಗಾವಿ‌ ವಿಭಾಗದ ಪ್ರಾದೇಶಿಕ ಆಯುಕ್ತರಾದ ಸಂಜಯ ಶೆಟ್ಟಣ್ಣವರ, ಜಿಲ್ಲಾಧಿಕಾರಿ‌ ಮೊಹಮ್ಮದ್‌ ರೋಷನ್, ಪೋಲಿಸ್ ಆಯುಕ್ತ ಯಡಾ ಮಾರ್ಟಿನ್‌ ಮಾರ್ನಬ್ಯಾಂಗ್ ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಪ್ರಶಿಕ್ಷಣಾರ್ಥಿ ಐ.ಎ.ಎಸ್. ಅಧಿಕಾರಿ ದಿನೇಶ ಕುಮಾರ ಮೀನಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.