ಅರಣ್ಯಭೂಮಿ ಗಡಿ ಗುರುತಿಸಿಲು ಜಂಟಿ ಸರ್ವೆ ಅಗತ್ಯ
–ಸಚಿವ ಈಶ್ವರ ಖಂಡ್ರೆ
ಬೆಳಗಾವಿ ಸುವರ್ಣಸೌಧ,ಡಿ.14: ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಶ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.
ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಗುರುವಾರ ವಿಧಾನ ಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಕರ್ನಾಟಕ ಅರಣ್ಯ ನಿಯಮದ ಪ್ರಕಾರ ಜಿಲ್ಲಾ ಅರಣ್ಯ ಅಥವಾ ರಕ್ಷಿತ ಅರಣ್ಯಕ್ಕೆ ಹೊಂದಿಕೊಂಡತೆ ಹಾಗೂ 100 ಮೀಟರ್ ವ್ಯಾಪ್ತಿಯಲ್ಲಿನ ಭೂಮಿ ಮಂಜೂರಾತಿ ಪೂರ್ವದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಸಮ್ಮತಿ ಪಡೆಯುವುದು ಕಡ್ಡಾಯವಾಗಿದೆ.
ರೈತರು ಕಂದಾಯ ಇಲಾಖೆ ಸಾಗುವಳಿ ಚೀಟಿಗೆ ಸಂಬಂಧಿಸಿದಂತೆ ನಿರಾಪೇಕ್ಷಣ ಪತ್ರ ಕೋರಿದಾಗ ಅರಣ್ಯ ಇಲಾಖೆಯ ದಾಖಲೆ, ಅಧಿಸೂಚನೆ ಹಾಗೂ ನಕಾಶೆಗಳೊಂದಿಗೆ ಪರಿಶೀಲಿಸಿ ಜಾಗವು ಅರಣ್ಯ ಪ್ರದೇಶ ವ್ಯಾಪ್ತಿಗೆ ಬರುತ್ತದೆ ಅಥವಾ ಇಲ್ಲವೇ ಎಂದು ಹಿಂಬರಹ ನೀಡಲಾಗುತ್ತದೆ.
ಅಧಿಸೂಚಿತ ಹಾಗೂ ಡೀಮ್ಡ್ ಅರಣ್ಯ ಅರಣ್ಯ ಪ್ರದೇಶಗಳಿಗೆ ಸರ್ವೆ ನಂಬರ್‍ವಾರು ವಿವರವಾದ ಮಾಹಿತಿ ಇಲ್ಲದಂತಹ ಸಂದರ್ಭದಲ್ಲಿ ನಿರಾಕ್ಷೇಪಣ ಪತ್ರ ನೀಡಲು ಕಂದಾಯ ಇಲಾಖೆಯೊಂದಿಗೆ ಜಂಟಿ ಮೋಜಣಿ ಮಾಡಲಾಗುವುದು ಎಂದರು.

ಬೆಳ್ತಂಗಡಿ ಪ್ರದೇಶದ ರಿ.ಸಂ.69ರಲ್ಲಿ ಅರಣ್ಯ ಭೂಮಿ ಬಗ್ಗೆ ಜಂಟಿ ಸರ್ವೆ ಕೈಗೊಂಡಾಗ 500 ಎಕರೆ ಅಧಿಕ ಭೂಮಿ ಅರಣ್ಯ ಇಲಾಖೆ ಭೂಮಿಯೊಂದಿಗೆ ಇರುವುದು ಕಂಡುಬಂದಿದೆ. ಸರ್ಕಾರ ಅರಣ್ಯ ಅರಣ್ಯ ಭೂಮಿ ಗಡಿ ಗುರುತಿಸಿಲು ಜಂಟಿ ಸರ್ವೆ ನಡೆಸಬೇಕು ಎಂದರು..
ವರದಿ ಪ್ರಕಾಶ ಕುರಗುಂದ..