ಅಹಮದಾಬಾದ್ ವಿಮಾನ ದುರಂತದಲ್ಲಿ 242 ಪ್ರಯಾಣಿಕರ ದುರ್ಮರಣ..
ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ..
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ..
ಬೆಳಗಾವಿ : ಗುಜರಾತಿನ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ 242 ಪ್ರಯಾಣಿಕರೊಂದಿಗೆ ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುವ ವೇಳೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದ್ದು ತೀವ್ರ ಆಘಾತ ಮತ್ತು ನಂಬಲಾಗದಂತಾಗಿದೆ.

ವಿಮಾನ ಅಪಘಾತ ಹೃದಯವಿದ್ರಾವಕ ಘಟನೆಯಾಗಿದ್ದು ದುರಂತದಲ್ಲಿ ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ, ಮತ್ತು ಅವರ ಕುಟುಂಬಗಳಿಗೆ ಈ ಅಪಾರ ನಷ್ಟವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ವರದಿ ಪ್ರಕಾಶ್ ಬಸಪ್ಪ ಕುರಗುಂದ..