ಎನ್.ಡಿ.ಎ ಗೆ ಮಣೆ ಹಾಕಿದ ಬಿಹಾರ ಜನತೆ..
ಚುನಾವಣೆಯಲ್ಲಿ ಜಯ ಸಾಧಿಸಿದ ಅಭ್ಯರ್ಥಿಗಳಿಗೆ ಅಭಿನಂದನೆಗಳು..
ಸಂಸದ ಜಗದೀಶ ಶೆಟ್ಟರ್
ಬೆಳಗಾವಿ : ಮೋದಿ ನಾಯಕತ್ವಕ್ಕೆ ಮಣೆ ಹಾಕಿದ ಬಿಹಾರ ಜನತೆ, ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಎನ್.ಡಿ.ಎ ಮೈತ್ರಿ ಕೂಟ, ಈ ಫಲಿತಾಂಶ ದೇಶದ ಜನತೆಯು ಮೋದಿ ನಾಯಕತ್ವವನ್ನು ಮೆಚ್ಚಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ್ ಅವರು ತಿಳಿಸಿದರು.
ಮುಂಬರುವ ದಿನಗಳಲ್ಲಿ ನಮ್ಮ ಕರ್ನಾಟಕದಲ್ಲಿಯೂ ಎನ್.ಡಿ.ಎ ಅಧಿಕಾರಕ್ಕೆ ಬರುವುದು ಖಚಿತ. ಹುಸಿ ಭರವಸೆಗಳ ಮೂಲಕ ಅಧಿಕಾರಕ್ಕೆ ಬಂದವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ.
ಎನ್.ಡಿ.ಎ ಮೈತ್ರಿಕೂಟದಲ್ಲಿರುವ ಮಿತ್ರ ಪಕ್ಷಗಳಿಗೆ ಅಭಿನಂದನೆಗಳು, ಬಿಹಾರ ಜನತೆ ಈ ನಿರ್ಧಾರ ದೇಶದ ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ, ಮುಂಬರುವ ದಿನಗಳಲ್ಲಿ ಸಂಪೂರ್ಣ ದೇಶವು ಎನ್.ಡಿ.ಎ ಗೆ ಬೆಂಬಲ ನೀಡುತ್ತದೆ, ಬಿಹಾರ ಫಲಿತಾಂಶ ಅದಕ್ಕೆ ಮುನ್ನುಡಿ ಬರೆದಿದೆ, ದೇಶದ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಎನ್.ಡಿ.ಗೆ ಮತ ನೀಡಿದ ಮತದಾರ ಪ್ರಭುಗಳಿಗೆ ಹೃತ್ಪೂರ್ವಕ ಧನ್ಯವಾದಗಳು.
ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿದ ಎನ್.ಡಿ.ಎ ಮೈತ್ರಿಕೂಟದ ಎಲ್ಲ ಅಭ್ಯರ್ಥಿಗಳಿಗೂ ಹೃತ್ಪೂರ್ವಕ ಅಭಿನಂದನೆಗಳು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.