ಎಸ್ಸೆಸೆಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಟಾಪರ್ ಆದ ಚೆನ್ನಮ್ಮನ ನಾಡಿನ ವಿದ್ಯಾರ್ಥಿನಿ ರೂಪಾ ಪಾಟೀಲ್..
ಹಳ್ಳಿಯ, ಸರ್ಕಾರಿ ಶಾಲೆಯ ಈ ವಿದ್ಯಾರ್ಥಿನಿ ಸಾಧನೆಗೆ ಪ್ರಶಂಸೆಯ ಸುರಿಮಳೆ..
ಬೆಳಗಾವಿ : ಇಂದು ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಂದಿದ್ದು, ಅದರಲ್ಲಿ ಕಿತ್ತೂರು ಚೆನ್ನಮ್ಮನ ನಾಡಿನ ಬೈಲಹೊಂಗಲ ತಾಲೂಕಿನ ಬಾಲಕಿ ರೂಪಾ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ನಾಡಿನ ಕೀರ್ತಿ ಹೆಚ್ಚಿಸಿದ್ದಾಳೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರಕಾರಿ ಶಾಲೆಯ ವಿದ್ಯಾರ್ಥಿನಿಯಾದ ರೂಪಾ ಪಾಟೀಲ್ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಸಾಧನೆ ಮಾಡಿದ್ದಾರೆ.
ವರದಿ ಪ್ರಕಾಶ್ ಬಸಪ್ಪ ಕುರಗುಂದ..