ಕನ್ನಡ ಹೋರಾಟಗಾರರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು..
ಕಿತ್ತೂರು ಕರ್ನಾಟಕ ಸೇನೆಯ ಪದಾಧಿಕಾರಿಗಳಿಂದ ಮನವಿ..
ಬೆಳಗಾವಿ : ಬೆಳಗಾವಿಯಲ್ಲಿ ಕಿತ್ತೂರು ಕರ್ನಾಟಕ ಸೇನೆಯ ಪದಾಧಿಕಾರಿಗಳು ರಾಜ್ಯಾಧ್ಯಕ್ಷರಾದ ಮಹಾದೇವ ತಳವಾರ ನೇತೃತ್ವದಲ್ಲಿ ಮುಖ್ಯಮಂತ್ರಿ ಮಂತ್ರಿ ಸಿದ್ದರಾಮಯ್ಯ ನವರಿಗೆ ಕನ್ನಡ ಹೋರಾಟಗಾರರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಾದೇವ ತಳವಾರ ಕಿತ್ತೂರು ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡಿ ಸಮಗ್ರ ಅಭಿವೃದ್ಧಿ ಮಾಡಬೇಕೆಂದು ಒತ್ತಾಯಿಸಿದರು.

1] ಬೆಳಗಾವಿಯ ಕನ್ನಡ ರಾಜ್ಯೋತ್ಸವ-2025ಕ್ಕೆ ಸರ್ಕಾರದಿಂದ ರೂ. 2.00ಕೋಟಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕು.
2] ಕಿತ್ತೂರು ಕರ್ನಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಿ ವಿಶೇಷ ಅನುದಾನ ಒದಗಿಸುವುದು.
3] ವಾಯವ್ಯ ಸಾರಿಗೆ ಸಂಸ್ಥೆಯ ಹೆಸರನ್ನು ಕಿತ್ತೂರು ಕರ್ನಾಟಕ ಸಾರಿಗೆ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಬೇಕು.
4) ಕಿತ್ತೂರು ಕರ್ನಾಟಕ ಭಾಗದಲ್ಲಿರುವ ಐಟಿ/ಬಿಟಿ ಮತ್ತು ಜವಳಿ ಪಾರ್ಕಗಳನ್ನು ನಿರ್ಮಿಸಿ ವಿಶೇಷ ಅನುದಾನ ನೀಡಿ ಕಾರ್ಯಗತಗೊಳಿಸಬೇಕು.
5] ಸುವರ್ಣ ವಿಧನ ಸೌಧಕ್ಕೆ ವಿಭಾಗೀಯ ಕಛೇರಿಗಳನ್ನು ಸ್ಥಳಾಂತರಗೊಳಿಸಿ ಈ ಭಾಗದ ಜನ ಸಾಮಾನ್ಯರು ಬೆಂಗಳೂರು ಅಲೆದಾಡುವುದನ್ನು ತಪ್ಪಿಸಬೇಕು.
6] ಸುವರ್ಣ ವಿಧಾನ ಸೌಧದ ಮುಂಭಾಗದಲ್ಲಿ ಬೆಳವಡಿ ಮಲ್ಲಮ್ಮ. ಅಮಟೂರು ಬಾಳಪ್ಪ ಮತ್ತು ಸಿಂಧೂರ ಲಕ್ಷ್ಮಣರವರ ಪ್ರತಿಮೆಗಳನ್ನು ಪ್ರತಿಷ್ಠಾಪನೆ ಮಾಡಬೇಕು.
7] ಕೃಷ್ಣಾ ಮತ್ತು ಮಹಾದಾಯಿ ನದಿಗಳಿಗೆ ಸಂಬಂಧಿಸಿದ ನೀರಾವರಿ ಯೋಜನೆಗಳಿಗೆ ಒತ್ತು ನೀಡಿ ಅನುದಾನ ಒದಗಿಸಿ ಯೋಜನೆಗಳನ್ನು ಪೂರ್ಣಗೊಳಿಸುವುದು.
8] ಕರ್ನಾಟಕ ಲಾಂಛನದಲ್ಲಿರುವ “ಸತ್ಯಮೇವ ಜಯತೆ” ವಾಕ್ಯವನ್ನು ಹಿಂದಿಯಿಂದ ಕನ್ನಡಕ್ಕೆ ಬದಲಾಯಿಸಬೇಕು.
9] ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಿತ್ತೂರು ಕರ್ನಾಟಕ ಭಾಗದ ಪ್ರತಿಯೊಂದು ತಾಲೂಕಿನಲ್ಲೂ ಐಟಿಐ, ಡಿಪ್ಲೋಮಾ ಪದವಿ ಮತತು ಕಾನೂನು ಕಾಲೇಜುಗಳನ್ನು ಪ್ರಾರಂಭಿಸಲು ಸೂಕ್ತ ಕ್ರಮಕೈಗೊಳ್ಳುವುದು.
10] ಸಾರಿಗೆ ಸಂಸ್ಥೆಯ ಬಸ್ಸುಗಳ ಓಡಾಟ ಕಡಿಮೆಯಾಗಿರುವುದರಿಂದ ಬಡ ವಿದ್ಯಾರ್ಥಿಗಳ ಬಹುಪಾಲ ಸಮಯ ಬಸ್ಸುಗಳ ಕಾಯುವಿಕೆಯಲ್ಲಿ ವ್ಯರ್ಥವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಮೊದಲಿನ ರೀತಿಯಲ್ಲಿಯೇ ಹೆಚ್ಚುವರಿ ಬಸ್ಸುಗಳನ್ನು ಓಡಿಸಲು ಕ್ರಮ ಜರುಗಿಸಬೇಕು.
11] ಬೆಂಗಳೂರು ನಗರ ಮಾದರಿಯಲ್ಲಿಯೇ ಬೆಳಗಾವಿ ನಗರ ಮತ್ತು ಬೆಳಗಾವಿಯಿಂದ ಧಾರವಾಡ-ಹುಬ್ಬಳ್ಳಿವರೆಗೆ ಮೆಟ್ರೋ ಟ್ರೇನ ಪ್ರಾರಂಭಿಸಲು ಯೋಜನೆಗಳನ್ನು ರೂಪಿಸಬೇಕು.
12] ಬೆಳಗಾವಿ ನಗರದ ಸಂಚಾರ ದಟ್ಟನೆಯನ್ನು ಕಡಿತಗೊಳಿಸಲು ಮತ್ತು ಭಾರಿ ವಾಹನಗಳ ಸಂಚಾರ ನಿಯಂತ್ರಿಸಲು ವರ್ತುಲ ರಸ್ತೆ (ರಿಂಗ್ ರೋಡ) ಮೇಲ್ಲೇತುವೆ ರಸ್ತೆಗಳನ್ನು ನಿರ್ಮಿಸಲು ಸೂಕ್ತ ಕ್ರಮ ಜರುಗಿಸಬೇಕು.

ಎಂಬ ವಿಷಯಗಳ ಕುರಿತಾಗಿ ಆಗ್ರಹ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ ಗೌರವಾಧ್ಯಕ್ಷೆ ಕಸ್ತೂರಿ ಭಾವಿ, ಜಿಲ್ಲಾಧ್ಯಕ್ಷ ಶಿವಾನಂದ ಕೋಲಕಾರ, ರಾಜ್ಯ ಪ್ರಧಾನ ಸಂಚಾಲಕ ದೇವೇಂದ್ರ ತಳವಾರ, ಜಿಲ್ಲಾ ಉಪಾಧ್ಯಕ್ಷ ಸಂತೋಷ ತಳ್ಳಿಮನಿ, ಭರಮಣ್ಣ ಬಡಸ ಆಟೋ ಘಟಕದ ಅಧ್ಯಕ್ಷ ವಾಸು ಬಸನಾಯ್ಕರ ಇತರರು ಉಪಸ್ಥಿತರಿದ್ದರು.