ಖಾಲಿ ಇರುವ ಸರ್ಕಾರಿ ಜಾಗಗಳ ರಕ್ಷಣೆಗೆ ಬೀಟ್ ವ್ಯವಸ್ಥೆ ಪಾಲಿಸಿ…

ಖಾಲಿ ಇರುವ ಸರ್ಕಾರಿ ಜಾಗಗಳ ರಕ್ಷಣೆಗೆ ಬೀಟ್ ವ್ಯವಸ್ಥೆ ಪಾಲಿಸಿ..

ಕಂದಾಯ ಸಚಿವ ಕೃಷ್ಣಭೈರೇಗೌಡ

ಸುವರ್ಣಸೌಧ ಬೆಳಗಾವಿ : ಡಿ.11: : ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಜಾಗಗಳ ರಕ್ಷಣೆಗೆ ಸರ್ಕಾರ ಮುಂದಾಗಿದೆ. ಮೊಬೈಲ್ ಆಪ್ ಮೂಲಕ ಖಾಲಿ ಜಾಗಗಳ ಜಿ.ಪಿ.ಎಸ್ ಲೋಕೇಷನ್ ಮಾರ್ಕ್ ಮಾಡಿ, ಬೌಂಡರಿ ಫಿಕ್ಸ್ ಮಾಡಲಾಗಿದೆ.

ಕಂದಾಯ ಇಲಾಖೆ ಅಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಖಾಲಿ ಜಾಗಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲು ಬೀಟ್ ಸಿಸ್ಟಂ ಜಾರಿ ಮಾಡಲಾಗಿದೆ, ಒತ್ತುವರಿ ಯಾಗಿರುವುದು ಕಂಡುಬಂದರೆ ಕೂಡಲೇ ಸಂಬಂಧ ಪಟ್ಟ ತಹಶೀಲ್ದಾರ್ ತೆರವುಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.

ಸೋಮವಾರ ವಿಧಾನ ಸಭಾ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಮಂಡ್ಯ ಶಾಸಕ ರವಿಕುಮಾರಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು,
ಬೀಟ್ ಸಿಸ್ಟಂ ಮೊಬೈಲ್ ಲೋಕೇಷನ್ ಆಧಾರದ ಮೇಲೆ ಕಾರ್ಯ ನಿರ್ವಹಿಸುವುದರಿಂದ ಅಧಿಕಾರಿಗಳು ಕಡ್ಡಾಯ ಸ್ಥಳಕ್ಕೇ ತೆರಳಬೇಕು, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಸರ್ಕಾರಿ ಜಾಗಗಳನ್ನು ಕಬಳಿಸುವಲ್ಲಿ ಅಧಿಕಾರಿಗಳು ಶಾಮೀಲು ಆಗುತ್ತಿದ್ದಾರೆ ದುರ್ದೈವದ ಸಂಗತಿ, ಈಗಿರುವ ಕಾನೂನುಗಳನ್ನು ಸರಿಯಾಗಿ ಪಾಲನೆ ಮಾಡಿದರೆ ಸರ್ಕಾರಿ ಜಾಗಗಳನ್ನು ರಕ್ಷಿಸಿಕೊಳ್ಳಬಹುದು ಎಂದರು.

ವರದಿ ಪ್ರಕಾಶ ಕುರಗುಂದ..