ಗೃಹಲಕ್ಷ್ಮೀ ಫಲಾನುಭವಿಗಳ ಮರು ಸಮೀಕ್ಷೆ..

ಗೃಹಲಕ್ಷ್ಮೀ ಫಲಾನುಭವಿಗಳ ಮರು ಸಮೀಕ್ಷೆ..

ಅಧಿಕಾರಿಗಳಿಗೆ ಒಂದು ದಿನದ ವಿಶೇಷ ತರಬೇತಿ..

ಬೆಳಗಾವಿ, ಸೆ.10 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವತಿಯಿಂದ ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ‘ಗೃಹಲಕ್ಷ್ಮೀ ಫಲಾನುಭವಿಗಳ ಮರು ಸಮೀಕ್ಷೆ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿನಯ ಬಾಳಪ್ಪ ನಾವಲಗಟ್ಟಿ ಅವರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಮರು ಸಮೀಕ್ಷೆಯನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರನ್ನು ಒಳಗೊಂಡಂತೆ ಯಶಸ್ವಿಯಾಗಿ ಕೈಗೊಳ್ಳುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕರೆ ನೀಡಿದರು.

ಗೃಹಲಕ್ಷ್ಮೀ ಫಲಾನುಭವಿಗಳ ಮರು ಸಮೀಕ್ಷೆಯ ಹಂತ ಹಂತದ ಕಾರ್ಯನಿರ್ವಹಣೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಚೇತನ್ ಕುಮಾರ ಎಂ.ಎನ್. ಅವರು ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಕಾಂಚನಾ ಅಮಠೆ, ಜಿಲ್ಲಾ ನಿರೂಪಣಾಧಿಕಾರಿಗಳು, ಅಣ್ಣಪ್ಪ ಹೆಗಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹಿರಿಯ ಮೇಲ್ವಿಚಾರಕಿಯರು ಹಾಗೂ ಮೇಲ್ವಿಚಾರಕಿಯರು ಉಪಸ್ಥಿತರಿದ್ದರು.

ವರದಿ ಪ್ರಕಾಶ ಬಿ ಕೆ..