ಗೋಕಾಕ ನಗರದ ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ಬೇಟಿ..
ಅತಿವೃಷ್ಟಿ ಸಂತ್ರಸ್ತರಿಗೆ ಸಮರ್ಪಕ ವ್ಯವಸ್ಥೆ ನೀಡಬೇಕು..
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್..
ಬೆಳಗಾವಿ : ಜಿಲ್ಲೆಯ ಗೋಕಾಕ ನಗರದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತ ಕುಟುಂಬಗಳಿಗಾಗಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಭಾನುವಾರ ಭೇಟಿ ನೀಡಿ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.

ಸಂತ್ರಸ್ತ ಕುಟುಂಬಗಳಿಗೆ ತಕ್ಷಣವೇ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಊಟೋಪಹಾರ ಸೇರಿದಂತೆ ಎಲ್ಲ ರೀತಿಯ ಅಗತ್ಯ ನೆರವು ಒದಗಿಸಲಾಗುತ್ತಿದೆ.

ಸಂತ್ರಸ್ತರಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಸಮರ್ಪಕ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ತಹಶೀಲ್ದಾರ ಹಾಗೂ ನೋಡಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಜಿಲ್ಲಾಧಿಕಾರಿ ರೋಷನ್ ನೀಡಿದರು.
ವರದಿ ಪ್ರಕಾಶ್ ಬಸಪ್ಪ ಕುರಗುಂದ..