ಗ್ರಾಪಂ ಸಿಬ್ಬಂದಿಗಳ ವಿವಿಧ ಬೇಡಿಕೆ ಈಡೇರಿಕೆಗಾಗಿ ಸಿಐಟಿಯು ಕಡೆಯಿಂದ ಪ್ರತಿಭಟನೆ..

ಗ್ರಾಪಂ ಸಿಬ್ಬಂದಿಗಳ ವಿವಿಧ ಬೇಡಿಕೆ ಈಡೇರಿಕೆಗಾಗಿ ಸಿಐಟಿಯು ಕಡೆಯಿಂದ ಪ್ರತಿಭಟನೆ..

ನೀರುಗಂಟೆಗಳಿಗೆ ನಿರ್ದಿಷ್ಟ ಕೆಲಸ ನೀಡಬೇಕು..

ಬೆಳಗಾವಿ : ಗ್ರಾಪಂಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಅವರಿಗೆ ಪ್ರತಿ ತಿಂಗಳು ಕನಿಷ್ಠ 6000 ರೂ. ಪಿಂಚಣಿ ವ್ಯವಸ್ಥೆ ಜಾರಿಗೆ ತರುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಸಿಐಟಿಯು ಕಾರ್ಯಕರ್ತರು ಚನ್ನಮ್ಮ ವೃತ್ತದಿಂದ ಪ್ರತಿಭಟನಾ ರ್ಯಾಲಿ ನಡೆಸಿ ಜಿಪಂ ಸಿಇಒಗೆ ಮನವಿ ಸಲ್ಲಿಸಿದರು.

ಸ್ವಚ್ಛ ವಾಹಿನಿ ನೌಕರರಿಗೆ ತರಬೇತಿ ಪಡೆದ ಎಲ್ಲರಿಗೂ ಉದ್ಯೋಗ ನೀಡವುದು, ಒಡಂಬಡಿಕೆ ಮತ್ತು ವಾರ್ಷಿಕ ನವೀಕರಣ ರದ್ದು ಪಡಿಸಬೇಕು ಹಾಗೂ 15ನೇ ಹಣಕಾಸಿನಲ್ಲಿ ವೇತನ ಪಾವತಿಸಿ ಪ್ರತಿಯೊಂದು ಪಂಚಾಯಿತಿಗೆ ಒಬ್ಬ ಚಾಲಕರನ್ನು ಪರಿಗಣಿಸಿ ರೂ.15,000 ರೂ. ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್‌ಗಳಲ್ಲಿ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುವ ಡಾಟಾ ಎಂಟ್ರಿ ಅಪರೇರ್ಟಗಳನ್ನು ನೇಮಕ ಮಾಡಿಕೊಂಡು ಮುಂದುವರೆಸಬೇಕು. ಅಲ್ಲದೆ ಈಗಾಗಲೇ ಗ್ರಾಮ ಪಂಚಾಯತ್‌ಗಳಲ್ಲಿ ಕೆಲಸ ನಿರ್ವಹಿಸುವ ನೌಕರರ ಕಂಪ್ಯೂಟರ್ ಜ್ಞಾನ ಹಾಗೂ ವಿದ್ಯಾರ್ಹತೆ ಹೊಂದಿದ್ದರೆ ಅವರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ವರ್ಗಾವಣೆಗೆ ಅವಕಾಶ ನೀಡಬೇಕು ಮತ್ತು ನೀರುಗಂಟೆಗಳಿಗೆ ಮಲ್ಟಿ ಪರ್ಪಸ್ ಎಂದಿರುವುದನ್ನು ಕೈ ಬಿಟ್ಟು ನಿರ್ದಿಷ್ಟವಾದ ಕೆಲಸಗಳನ್ನು ನಿಗದಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಜಿ.ಎಮ್. ಜೈನೆಖಾನ್, ವೀರಭದ್ರ ಕಂಪ್ಲಿ, ಮಡ್ಡೆಪ್ಪ ಭಜಂತ್ರಿ, ದಿಲೀಪ್ ಬೋವಿ, ಎಸ್.ಐ.ಸಿದ್ನಾಳ, ಯಲ್ಲನಗೌಡ ಪಾಟೀಲ್, ಬಾಳೇಶ್ ದುಂಡಾನಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *