ಜಾತಿ ಸಮೀಕ್ಷೆ ವೇಳೆ ವಿದ್ಯಾರ್ಥಿಗಳ ಶೈಕ್ಷಣಿಕ ನಷ್ಟವಾಗದಿರಲಿ…

ಜಾತಿ ಸಮೀಕ್ಷೆ ವೇಳೆ ವಿದ್ಯಾರ್ಥಿಗಳ ಶೈಕ್ಷಣಿಕ ನಷ್ಟವಾಗದಿರಲಿ…

ದಿಶಾ ಸಮಿತಿ ಸಭೆಯಲ್ಲಿ ಸಂಸದ ಶೆಟ್ಟರ್ ಸಲಹೆ..

ವಿಶೇಷ ತರಗತಿ ನಡೆಸಲಾಗುತ್ತಿದೆ ಎಂದ ಶಿಕ್ಷಣಾಧಿಕಾರಿಗಳು..

ಬೆಳಗಾವಿ : ಜಾತಿ ಸಮೀಕ್ಷೆಯ ವೇಳೆ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ನಷ್ಟ ಉಂಟಾಗದಂತೆ ಕ್ರಮವಹಿಸಲು ಸಂಸದ ಜಗದೀಶ್ ಶೆಟ್ಟರ್ ಅವರು ದಿಶಾ ಸಮಿತಿಯ ಸಭೆಯಲ್ಲಿ ಸಲಹೆ ನೀಡಿದರು.

ಸಂಸದರಾದ ಜಗದೀಶ್ ಶೆಟ್ಟರ್ ಅವರು ಅಧ್ಯಕ್ಷತೆಯಲ್ಲಿ ಇಂದು ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ ನಡೆಯಿತು. ಈ ವೇಳೆ ಸಂಸದ ಜಗದೀಶ್ ಶೆಟ್ಟರ್ ಅವರು ಜಾತಿ ಸಮೀಕ್ಷೆಯ ವಿಸ್ತರಣೆ ಹಿನ್ನೆಲೆ ಮಕ್ಕಳ ಶಾಲಾ ರಜೆಯನ್ನು ಹೆಚ್ಚಿಸಲಾಗಿದೆ. ಇದರಿಂದಾಗಿ ಪಠ್ಯಕ್ರಮ ಹಿಂದುಳಿದು, ಮಕ್ಕಳಿಗೆ ಶೈಕ್ಷಣಿಕ ನಷ್ಟವಾಗದಂತೆ ಕ್ರಮವಹಿಸಬೇಕೆಂದು ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಡಿಪಿಐ ಲೀಲಾವತಿ ಹಿರೇಮಠ ಸರ್ಕಾರದ ಸಮೀಕ್ಷೆಯಲ್ಲಿ ಶೇ.98 ರಷ್ಟು ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಳಸಲಾಗಿದೆ. ನಗರ ಭಾಗದಲ್ಲಿ ಮಾತ್ರ ಮಾಧ್ಯಮಿಕ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳಲಾಗಿದೆ. ಅಲ್ಲದೇ ಬೆಳಿಗ್ಗೆ 9 ರಿಂದ ಮಧ್ಯಾನ್ಹ 1 ಗಂಟೆಯ ವರೆಗೆ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.

ಇದಕ್ಕೆ ಸಂಸದರು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮವಹಿಸಲು ಹೇಳಿದರು. ಈ ವೇಳೆ ಶಿಕ್ಷಣಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನೇ ಬಳಸಿಕೊಳ್ಳದೇ, ಬೇರೆ ಇಲಾಖೆಯ ಸಿಬ್ಬಂದಿಗಳನ್ನು ಕೂಡ ಬಳಸಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಲೋಕಸಭಾ ಸದಸ್ಯೆ ಪ್ರಿಯಂಕಾ ಜಾರಕಿಹೊಳಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.