ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿ ಸಭೆ…

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿ ಸಭೆ..

ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಬೇಡ..

ಅಧಿಕಾರಿಗಳ ನಿಧಾನಗತಿಯ ಕಾರ್ಯವೈಖರಿ ಸರಿಯಲ್ಲ..

ಸಂಸದ ಜಗದೀಶ್ ಶೆಟ್ಟರ್..

ಬೆಳಗಾವಿ : ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ ಅವರ ನೇತೃತ್ವದಲ್ಲಿ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜರುಗಿದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯಲ್ಲಿ ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಕೇಂದ್ರ ಸರ್ಕಾರದ ಹಲವಾರು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನು ವೇಗವಾಗಿ ಕೆಲಸ ಮಾಡಬೇಕು ಎಂಬ ಸಲಹೆಯನ್ನು ನೀಡಿದ ಸಂಸದರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಬೇಟಿ ಬಚಾಯೋ ಬೇಟಿ ಪಡಾವೋ ಯೋಜನೆಯ ಅನುದಾನ ಬಳಕೆಯಲ್ಲಿಯ ನಿಧಾನಗತಿ ಕಾರ್ಯಕ್ಕೆ ಸಿಡಿಮಿಡಿಗೊಂಡ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು, ಆದಷ್ಟು ಬೇಗ ಅನುದಾನವನ್ನು ಸದ್ಬಳಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು..

ಇನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಂದ ಶಿಕ್ಷಣದ ಪ್ರಗತಿಯ ಬಗ್ಗೆ ಮಾಹಿತಿ ಪಡೆದ ಸಂಸದರು ಕೇಂದ್ರ ಸರ್ಕಾರದ ಸ್ಮಾರ್ಟ್ ಕ್ಲಾಸ್ ಯೋಜನೆಯ ಸದ್ಬಳಕೆಯಲ್ಲಿ ಆದ ಹಿನ್ನೆಡೆಗಾಗಿ ಅಧಿಕಾರಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಶಾಲಾ ಮುಖ್ಯ ಶಿಕ್ಷಕರಿಗೆ ಸರಿಯಾದ ತರಬೇತಿಗಳನ್ನು ನೀಡಿ, ಆದಷ್ಟು ಹೆಚ್ಚು ಶಾಲೆಗಳು ಕೇಂದ್ರ ಸರ್ಕಾರದ ಸ್ಮಾರ್ಟ್ ಕ್ಲಾಸ್ ಗಳಿಗೆ ಆಯ್ಕೆಯಾಗಬೇಕು ಎಂದು ಸಲಹೆ ಸೂಚನೆಗಳನ್ನು ನೀಡಿದ್ದಾರೆ..

ಅದೇ ರೀತಿ ಕಳೆದ 2011ರಿಂದ ಇಲ್ಲಿವರೆಗೂ ಅಂದರೆ ಸುಮಾರು 13 ವರ್ಷಗಳ ಅವಧಿಯಲ್ಲಿ ತಮ್ಮ ಜಿಲ್ಲಾ ಮಟ್ಟದ ಸಾಕ್ಷರತೆಯ ಪ್ರಮಾಣ ಎಷ್ಟು ಹೆಚ್ಚಾಗಿದೆ? ಎಷ್ಟು ಪ್ರಗತಿ ಸಾಧಿಸಿದ್ದಿರಾ ಎಂದು ಪ್ರಶ್ನೆಮಾಡಿದಾಗ ಅಧಿಕಾರಿಗಳಿಂದ ಸಮಂಜಸ ಉತ್ತರವಿರಲಿಲ್ಲ..

ಇನ್ನು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧಿಕಾರಿಗಳನ್ನು ತಮ್ಮ ಇಲಾಖೆಯಲ್ಲಿರುವ ಕೈಗಾರಿಕಾ ನಿವೇಶನಗಳು ಎಷ್ಟಿವೆ? ಇನ್ನು ಎಷ್ಟು ನಿವೇಶನಗಳ ನಿರ್ಮಾಣದಲ್ಲಿ ಕಾರ್ಯ ನಡೆಯುತ್ತಿದೆ, ನಿರ್ಮಾಣದಲ್ಲಿ ಸಮಸ್ಯೆಗಳೇನು ಎಂಬುದರ ಬಗ್ಗೆ ಸಂಸದ ಶೆಟ್ಟರ್ ಅವರು ಪ್ರಶ್ನೆ ಮಾಡಲಾಗಿದ್ದು ಅಧಿಕಾರಿಗಳು ಸ್ಪಷ್ಟವಾದ ಉತ್ತರ ನೀಡದೆ, ದಾಖಲೆಗಳನ್ನು ನೀಡುತ್ತೇವೆ ಎಂದರು..

ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ರೈತರ ಬೆಳೆಗಳು ಹಾನಿಯಾದ ಕುರಿತು ಮಾಹಿತಿ ಪಡೆದು, ಪರಿಹಾರ ಧನ ವಿತರಿಸುವ ಬಗ್ಗೆ ಹಾಗೂ ಕೇಂದ್ರ ಸರ್ಕಾರದ ಫಸಲ ಭೀಮಾ ಯೋಜನೆಯ ವಿವರಗಳನ್ನು ಚರ್ಚಿಸಲಾಯಿತು.

ಕೃಷಿ ಇಲಾಖೆ, ತೋಟಗಾರಿಕೆ ಬೆಳೆಗಳ ಹಾನಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಉದ್ಯೋಗ ಖಾತರಿ ಯೋಜನೆ ಹಾಗೂ ಇತರ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ರಾಜ್ಯ ಸಭಾ ಸದಸ್ಯರಾದ ಈರಣ್ಣಾ ಕಡಾಡಿ, ಶಾಸಕರಾದ ಆಸಿಫ್ (ರಾಜು) ಸೇಠ, ಜಿಲ್ಲಾಧಿಕಾರಿಗಳಾದ ರೋಶನ್ ಮಹಮದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹಾಗೂ ಎಲ್ಲ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ವರದಿ ಪ್ರಕಾಶ್ ಬಸಪ್ಪ ಕುರಗುಂದ..