ಜೈನ ಮುನಿ ಸಾವಿಗೆ ಸಂತಾಪ ಸೂಚಿಸಿದ ಸಚಿವ ಸತೀಶ ಜಾರಕಿಹೊಳಿ..
ಸಮರ್ಥವಾದ ತನಿಖೆಯಾಗಿ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುತ್ತದೆ..
ಸಚಿವ ಸತೀಶ ಜಾರಕಿಹೋಳಿ ವಿಶ್ವಾಸ..
ಬೆಳಗಾವಿ : ಶುಕ್ರವಾರ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಚಿಕ್ಕೋಡಿ ತಾಲೂಕಿನ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮಕ್ಕೆ ಭೇಟಿ ನೀಡಿ, ಜೈನ ಮುನಿ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಹತ್ಯಗೆ ಸಂತಾಪ ಸೂಚಿಸಿ, ಭಕ್ತಾದಿಗಳಿಗೆ ಸಾಂತ್ವನ ಹೇಳಿದರು.
ಆಘಾತದಲ್ಲಿರುವ ಸಮಸ್ತ ಜೈನ ಸಮುದಾಯದ ಬಂಧುಗಳ ನೋವಿನಲ್ಲಿ ನಾವೆಲ್ಲ ಭಾಗಿಯಾಗಿದ್ದೇವೆ. ಆರೋಪಿಗಳಿಗೆ ತಕ್ಕ ಕಾನೂನು ಕ್ರಮ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಮಾಜಿ ಸಚಿವರಾದ ವೀರಕುಮಾರ ಪಾಟೀಲ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಸೇರಿ ಪ್ರಮುಖರು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಪ್ರಕಾಶ ಕುರಗುಂದ..
