ಡಾ ಪ್ರಭಾಕರ ಕೋರೆ ಅವರಿಗೆ ಅಭಿನಂದಿಸಿದ ಮಾಜಿ ಶಾಸಕ ಅನಿಲ ಬೆನಕೆ..

ಡಾ ಪ್ರಭಾಕರ ಕೋರೆ ಅವರಿಗೆ ಅಭಿನಂದಿಸಿದ ಮಾಜಿ ಶಾಸಕ ಅನಿಲ ಬೆನಕೆ..

ಬೆಳಗಾವಿ : ಡಾ. ಪ್ರಭಾಕರ ಬಿ ಕೋರೆ ಅವರು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ ನಿಮಿತ್ತ ಬೆಳಗಾವಿಯ ಉತ್ತರ ಮತಕ್ಷೇತ್ರದ ಮಾಜಿ ಶಾಸಕರಾದ ಅನಿಲ ಬೆನಕೆ ಅವರು ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ದೇಶದ ಪ್ರತಿಷ್ಟಿತ ಈ ಅರ್ಹ ಗೌರವವು ಕೋರೆ ಅವರ ದೂರದೃಷ್ಟಿಯ ನಾಯಕತ್ವ, ನಿಸ್ವಾರ್ಥ ಸೇವೆ, ಶಿಕ್ಷಣ, ಆರೋಗ್ಯ ಮತ್ತು ಸಮಾಜಕ್ಕೆ ನೀಡಿದ ಗಮನಾರ್ಹ ಕೊಡುಗೆಗಳಿಗೆ ಸಾಕ್ಷಿಯಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದೇ ರೀತಿ ಅವರ ಯಶಸ್ವಿ ಜೀವನ ಮುಂದುವರೆದು, ಭವಿಷ್ಯದಲ್ಲಿ ಸಮಾಜಕ್ಕೆ ಒಳಿತಾಗುವ ಇನ್ನೂ ಹಲವಾರು ಕಾರ್ಯಗಳನ್ನು ಅವರು ಮಾಡಲಿ, ಅವು ಸಮಾಜಕ್ಕೆ ಸ್ಫೂರ್ತಿಯಾಗಲಿ ಎಂಬ ಭಾವನೆಯಿಂದ ಪುಷ್ಪಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ..