ಡಾ ಬಾಬು ಜಗಜೀವನರಾಮ್ ಅವರ 118ನೆ ಜನ್ಮ ದಿನಾಚರಣೆ.

ಡಾ ಬಾಬು ಜಗಜೀವನರಾಮ್ ಅವರ 118ನೆ ಜನ್ಮ ದಿನಾಚರಣೆ.

ಜಗಜೀವನರಾಮರವರ ವಿಚಾರ ಹಾಗೂ ಕೊಡುಗೆಗಳು ಸಮಕಾಲೀನ ಸಮಾಜಕ್ಕೆ ಪ್ರಸ್ತುತ.

ರಾಮನಗೌಡ ಕಣ್ಣೊಳ್ಳಿ, ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ..

ಬೆಳಗಾವಿ : ಹಸಿರು ಕ್ರಾಂತಿಯ ಹರಿಕಾರ ಡಾ ಬಾಬು ಜಗಜೀವನರಾಮ್ ರವರ ಜೀವನದ ಆದರ್ಶಗಳು ಹಾಗೂ ಸಮಾಜಕ್ಕೆ ಅವರು ನೀಡಿದ ಕೊಡುಗೆಗಳು ನಮ್ಮ ಈ ಸಮಕಾಲೀನ ಸಮಾಜಕ್ಕೆ ತುಂಬಾ ಪ್ರಸ್ತುತವಾಗಿದ್ದು ಯುವ ಸಮೂಹ ಅವುಗಳನ್ನು ಅನುಕರಣೆ ಮಾಡಿ, ಸಮಾಜದ ಮತ್ತಷ್ಟು ಉನ್ನತಿಗೆ ಕಾರಣರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಾಮನಗೌಡ ಕಣ್ಣೊಳಿ ಹೇಳಿದ್ದಾರೆ.

ಶನಿವಾರ ದಿನಾಂಕ 05/04/2025 ರಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತಿ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಲಾದ ಡಾ ಬಾಬು ಜಗಜೀವನರಾಮ್ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ವಿಜಯಕುಮಾರ ಹೊಣಕೇರಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಾಮನಗೌಡ ಕಣ್ಣೊಳ್ಳಿ ಅವರು ಮಾತನಾಡಿ, ಡಾ ಬಾಬು ಜಗಜೀವನರಾಮ್ ಅವರ ಕೊಡುಗೆಗಳನ್ನು ನಾವು ಎಂದೂ ಮರೆಯಬಾರದು, ನಾವೆಲ್ಲಾ ಅವರು ಹಾಕಿಕೊಟ್ಟ ಅಭಿವೃದ್ಧಿಯ ಮಾರ್ಗದಲ್ಲಿ ನಡೆಯಬೇಕು ಎಂಬ ಸಂದೇಶ ನೀಡಿದ್ದಾರೆ.

ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡಾ ಜಗಜೀವನರಾಮ್ ರವರ ಜಯಂತಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿಗೆ ವಿದ್ಯುಕ್ತ ಚಾಲನೆ ನೀಡಿದ್ದು, ನಂತರ ಚೆನ್ನಮ್ಮ ವೃತ್ತದ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯ ಮೂಲಕ ಸಾಗಿ ನಂತರ ಸಂಗಮೇಶ್ವರ ನಗರದ ಜಗಜೀವನರಾಮ್ ಉದ್ಯಾನದವರೆಗೆ ತಲುಪಿತು.

ಜಯಂತಿಯ ಈ ಚಾಲನಾ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಶುಭ ಬಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬಸವರಾಜ ಕುರುಹುಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ನಾಗರಾಜ್ ಆರ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿ ಪೂಜೇರಿ, ಜವಳಿ ಮತ್ತು ಕೈಮಗ್ಗ ಇಲಾಖೆಯ ಅಧಿಕಾರಿ ಜಯಚಂದ್ರ ಪಾಟೀಲ್, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಅಂಗವಿಕಲ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ನಾಮದೇವ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಅಧಿಕಾರಿ ಶ್ರೀನಿವಾಸ ಬಿ, ವಾಲ್ಮೀಕಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಬಸವರಾಜ, ಪಾಲಿಕೆಯ ಉಪಆಯುಕ್ತರಾದ ಲಕ್ಷ್ಮಿ ನಿಪ್ಪಾನಿಕರ, ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ಸಮುದಾಯದ ಮುಖಂಡರು, ಸಮಾಜ ಕಲ್ಯಾಣ ಇಲಾಖೆಯ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು..

ನಂತರ ವೇದಿಕೆ ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಆಶಿಫ್ (ರಾಜು) ಸೇಠ್ ಅವರು ದ್ವೀಪ ಬೆಳಗಿಸುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಜೊತೆಗೆ ಪಾಲಿಕೆಯ ಮಹಾಪೌರ, ಉಪ ಮಹಾಪೌರ, ನಗರ ಸೇವಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದ ಉದ್ಘಾಟನೆಯಲ್ಲಿ ಭಾಗಿಯಾಗಿದ್ದು, ಇದಕ್ಕೂ ಮುಂಚೆ ಉದ್ಯಾನ ವನದಲ್ಲಿರುವ ಡಾ ಬಾಬು ಜಗಜೀವನರಾಮ್ ಅವರ ಪುತ್ಥಳಿಗೆ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಹಾಗೂ ಸಮುದಾಯದ ಪ್ರಮುಖರಿಂದ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆಯನ್ನು ನೆರವೇರಿಸಲಾಯಿತು.

ವರದಿ ಪ್ರಕಾಶ ಬಸಪ್ಪ ಕುರಗುಂದ.