ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿಬ್ಬಾಣ ದಿನ:

ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿಬ್ಬಾಣ ದಿನ:

ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಲಾರ್ಪಣೆ

ಸುವರ್ಣಸೌಧ,ಬೆಳಗಾವಿ : ಡಿ.06:
ಭಾರತರತ್ನ,ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿಬ್ಬಾಣ ದಿನದ ಅಂಗವಾಗಿ ಸುವರ್ಣ ಸೌಧಧ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಾಬಾಸಾಹೇಬರಿಗೆ ಗೌರವ ನಮನ ಸಲ್ಲಿಸುತ್ತಾ, ಬಾಬಾಸಾಹೇಬರು ಭಾರತ ಸಂವಿಧಾನದ ಕರ್ತರು, ವೈರುದ್ಧ್ಯತೆ ಇದ್ದ ಸಮಾಜದಲ್ಲಿ, ಆರ್ಥಿಕ ಅಸಮಾನತೆ ತೊಡೆದು ಹಾಕಲು, ಇಂತಹ ಅಸಮಾನತೆ ಮುಂದುವರೆದರೆ, ದೇಶ ಶಾಂತಿಯಿಂದ ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ, ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ಮೇಲೆ ನಿಂತಾಗ ಮಾತ್ರ, ಸ್ವಾತಂತ್ರ ಸೌಧ ನಿಲ್ಲಲಿಕ್ಕೆ ಸಾಧ್ಯ ಎಂದು, ಸಾಮಾಜಿಕ ಸಮಾನತೆಯನ್ನು ಬಯಸಿ, ಸಂವಿಧಾನ ತಂದು ಮಾದರಿಯಾಗಿದ್ದಾರೆ..

ಅದೇ ವಿಚಾರಗಳನ್ನು ಇಟ್ಟುಕೊಂಡು ಇಂದು ನಮ್ಮ ಸರ್ಕಾರ ಸಮಾನತೆ, ಸ್ವಾವಲಂಬನೆಗಾಗಿ ಹಲವು ಕಾರ್ಯಕ್ರಮಗಳ ಮೂಲಕ ಉತ್ತಮ ಆಡಳಿತ ನೀಡುತ್ತಿದ್ದೇವೆ ಎಂದರು..

ಸಚಿವರಾದ ಎಚ್.ಸಿ.ಮಹಾದೇವಪ್ಪ, ಆರ್.ಬಿ.ತಿಮ್ಮಾಪುರ, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೇರಿದಂತೆ ಅನೇಕ ಶಾಸಕರು ,ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ವರದಿ ಪ್ರಕಾಶ ಕುರಗುಂದ..