ಡಿಸಿಸಿ ಬ್ಯಾಂಕ್ ಗುದ್ದಾಟ ಜಾರಕಿಹೊಳಿ ಬ್ರದರ್ಸ್ ಮೆಲುಗೈ…

ಡಿಸಿಸಿ ಬ್ಯಾಂಕ್ ಗುದ್ದಾಟ ಜಾರಕಿಹೊಳಿ ಬ್ರದರ್ಸ್ ಮೆಲುಗೈ…

ಈ ಗೆಲುವು ಯರಗಟ್ಟಿ ಹಾಗೂ ಸವದತ್ತಿ ಕ್ಷೇತ್ರದ ಸರ್ವ ಜನತೆಗೆ ಸಪರ್ಪಣೆ..

ವಿಸ್ವಾಸ ವೈದ್ಯ, ಶಾಸಕರು ಸವದತ್ತಿ ಯಲ್ಲಮ್ಮ ಮತಕ್ಷೇತ್ರ..

ಬೆಳಗಾವಿ : ಜಿಲ್ಲೆಯಲ್ಲಿ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಡಿಸಿಸಿ ಬ್ಯಾಂಕ್ ಚುನಾವಣೆಗೆ ಇಂದು ನಾಮ ಪತ್ರ ಸಲ್ಲಿಕೆ ಮುಕ್ತಾಯವಾಗಿವೆ. ಹದಿನಾರು ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆ ಕಣದಲ್ಲಿ ಘಟಾನುಘಟಿ ನಾಯಕರೇ ಅಖಾಡಕ್ಕೆ ಧುಮ್ಮಿಕ್ಕಿದ್ದಾರೆ. ಆರಂಭದ ಹಂತದಲ್ಲೇ ಜಾರಕಿಹೊಳಿ ಬ್ರದರ್ಸ್ ಪೆನಲ್ ಮೆಲುಗೈ ಸಾಧಿಸಿದೆ. ಇತ್ತ ಕತ್ತಿ ಮತ್ತು ಸವದಿ ಪ್ಲ್ಯಾನ್ ಎನೂ ಅನ್ನೋದು ಇನ್ನು ಸಸ್ಪೆನ್ಸ್ ಆಗಿದೆ..

ಹೌದು ಬೆಳಗಾವಿ ಜಿಲ್ಲೆಯಲ್ಲಿ ಜಿದ್ದಾ ಜಿದ್ದಿಗೆ ಕಾರಣವಾಗಿರುವ ಡಿಸಿಸಿ ಬ್ಯಾಂಕ್ ಚುನಾವಣೆಗೆ ನಿನ್ನೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. ಡಿಸಿಸಿ ಬ್ಯಾಂಕ್ ನ ಹದಿನಾರು ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು 19ರಂದು ಮತದಾನ ನಡೆಯಲಿದೆ. ಈವರೆಗೂ ಒಟ್ಟು 64 ನಾಮ ಪತ್ರ ಸಲ್ಲಿಕೆಯಾಗಿವೆ. ಈ ಪೈಕಿ ಆರು ತಾಲೂಕಿನಲ್ಲಿ ಯಾವುದೇ ಸ್ಪರ್ಧಾತ್ಮಕ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆ ಅವಿರೋಧವಾಗಿ ಆಯ್ಕೆಯಾಗಿದ್ದು ಆರಂಭದಲ್ಲೇ ಜಾರಕಿಹೊಳಿ ಪೆನಲ್ ಮೇಲುಗೈ ಸಾಧಿಸಿದೆ.

ರಾಜಕೀಯ ಭವಿಷ್ಯ ನಿರ್ಧಾರ ಮಾಡುವ ಚುನಾವಣೆಗೆ ಘಟಾನುಘಟಿ ನಾಯಕರೇ ಸ್ಪರ್ಧೆ ಮಾಡುತ್ತಿದ್ದಾರೆ. ಹಾಲಿ ಮಾಜಿ ಶಾಸಕರು ಸೇರಿದಂತೆ ಮಾಜಿ ಸಂಸದರು ಕೂಡ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದಾರೆ. ಅದರಲ್ಲೂ ಈಗಾಗಲೇ ಜಾರಕಿಹೊಳಿ ಬ್ರದರ್ಸ್ 13ಜನರ ಒಂದು ಪೆನಲ್ ರೆಡಿ ಮಾಡಿಕೊಂಡು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಥಣಿ, ಕಾಗವಾಡ ಮತ್ತು ಚಿಕ್ಕೋಡಿ ತಾಲೂಕಿನಲ್ಲಿ ಯಾವುದೇ ಅಭ್ಯರ್ಥಿಗಳನ್ನ ಕಣಕ್ಕಿಳಿಸದೇ ಇನ್ನೂಳಿದ ಕಡೆಗಳಲ್ಲಿ ತಮ್ಮವರನ್ನ ಅಖಾಡಕ್ಕಿಳಿಸಿದ್ದಾರೆ. ಇತ್ತ ರಮೇಶ್ ಕತ್ತಿ ಮತ್ತು ಲಕ್ಷ್ಮಣ ಸವದಿ ನಡೆ ಇನ್ನೂ ನಿಗೂಢವಾಗಿದ್ದು ಜಾರಕಿಹೊಳಿ ಸಹೋದರರಿಗೆ ಶಾಕ್ ಕೊಡಲು ಮಾಸ್ಟರ್ ಪ್ಲ್ಯಾನ್ ಮಾಡ್ತಿದ್ದಾರೆ.

ಸದ್ಯ ಆರಂಭಿಕ ಹಂತದಲ್ಲಿ ಜಾರಕಿಹೊಳಿ ಬ್ರದರ್ಸ್ ಮೇಲುಗೈ ಸಾಧಿಸಿದ್ದು ಆರು ತಾಲೂಕಿನ ಪೈಕಿ ಐದು ಜಾರಕಿಹೊಳಿ ಬ್ರದರ್ಸ್ ಪೆನಲ್ ನವರು ಆಯ್ಕೆಯಾಗಿದ್ದಾರೆ. ಯಾವ ಕ್ಷೇತ್ರದಿಂದ ಯಾರು ಯಾರು ಆಯ್ಕೆ ಅನ್ನೋದನ್ನ ನೋಡೊದಾದ್ರೇ ಗೋಕಾಕದಿಂದ ಅಮರನಾಥ್ ಜಾರಕಿಹೊಳಿ, ಬೆಳಗಾವಿ ತಾಲೂಕಿನಿಂದ ರಾಹುಲ್ ಜಾರಕಿಹೊಳಿ, ಯರಗಟ್ಟಿ ವಿಶ್ವಾಸ್ ವೈದ್ಯ, ಸವದತ್ತಿ ವಿರೂಪಾಕ್ಷ ಮಾಮನಿ, ಮೂಡಲಗಿ ನೀಲಕಂಠ ಜಾರಕಿಹೊಳಿ ಪೆನಲ್ ನಲ್ಲಿದ್ದವರು ಅವಿರೋಧ ಆಯ್ಕೆಯಾದ್ರೇ ಇತ್ತ ಯಾವುದೇ ಪೆನಲ್ ನಲ್ಲಿ ಗುರುತಿಸಿಕೊಳ್ಳದೇ ಚಿಕ್ಕೋಡಿಯಿಂದ ನಾಮಪತ್ರ ಸಲ್ಲಿಸಿದ್ದ ಶಾಸಕ ಗಣೇಶ್ ಹುಕ್ಕೇರಿ ಕೂಡ ಆಯ್ಕೆಯಾಗಿದ್ದಾರೆ.

ನಿನ್ನೆ ಮಧ್ಯಾಹ್ನ ಮೂರು ಗಂಟೆ ವರೆಗೂ ಕಾದು ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆ ಶಾಸಕ ವಿಶ್ವಾಸ್ ವೈದ್ಯ, ನೀಲಕಂಡ, ಗಣೇಶ್ ಹುಕ್ಕೇರಿ ಬೆಂಬಲಿಗರು ಗುಲಾಲ್ ಹಚ್ಚಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಜಾರಕಿಹೊಳಿ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು…

ಈ ವೇಳೆ ಸುದ್ಧಿಗಾರರೊಂದಿಗೆ ಮಾತನಾಡಿದ ಶಾಸಕ ವಿಶ್ವಾಸ್ ವೈದ್ಯ, ಯಾರಗಟ್ಟಿ ತಾಲೂಕಿನಿಂದ ಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಅವಿರೋಧ ಆಗಿರುವ ಗೆಲುವನ್ನು ಯರಗಟ್ಟಿ ಪಿಕೆಪಿಎಸ್ ಸರ್ವ ಮತದಾರರಿಗೆ ಹಾಗೂ ನನ್ನ ಕ್ಷೇತ್ರವಾದ ಸವದತ್ತಿ ಯಲ್ಲಮ್ಮ ಕ್ಷೆತ್ರದ ಸರ್ವ ಮತದಾರರಿಗೆ ಅರ್ಪಿಸುತ್ತೇನೆ ಎಂದಿದ್ದಾರೆ.

ನನ್ನ ಮಾರ್ಗದರ್ಶಕರಾದ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಶೀರ್ವಾದದಿಂದ ಈ ಗೆಲುವು ಎಂದು ಹೆಮ್ಮೆಯಿಂದ ಹೇಳುತ್ತೇನೆ, ಈಗ ಐದು ಸ್ಥಾನಗಳನ್ನು ಅವಿರೋಧವಾಗಿ ಗೆಲ್ಲುವ ಮೂಲಕ ಜಾರಕಿಹೊಳಿ ಬಣದ ಗೆಲುವು ಆರಂಭವಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಒಂದು ಕಡೆ ಜಾರಕಿಹೊಳಿ ಬ್ರದರ್ಸ್ ಆರಂಭಿಕ ಹಂತದಲ್ಲಿ ಮೇಲುಗೈ ಸಾಧಿಸಿದ್ರೂ ಅದಕ್ಕೆ ಠಕ್ಕರ್ ಕೊಡಲು ಲಕ್ಷ್ಮಣ ಸವದಿ ಹಾಗೂ ರಮೇಶ್ ಕತ್ತಿ ಮಾಸ್ಟರ್ ಪ್ಲ್ಯಾನ್ ಮಾಡ್ತಿದ್ದಾರೆ. ಹೇಗಾದ್ರೂ ಮಾಡಿ ಡಿಸಿಸಿ ಬ್ಯಾಂಕ್ ಅಧ್ಯಕ್ಷಗಾದಿ ಹಿಡಿಯಬೇಕು ಎಂಬ ಪ್ರಯತ್ನ ಮಾಡುತ್ತಿದ್ದು 19ರ ವರೆಗೂ ಕಾದು ನೋಡಿ ಅಂತಿದ್ದಾರೆ. ಇನ್ನೊಂದು ಕಡೆ ಇದೇ ಮೊದಲ ಬಾರಿಗೆ ಜಾರಕಿಹೊಳಿ ಸಹೋದರರು ತಾವು ಸ್ಪರ್ಧೆ ಮಾಡುವುದನ್ನ ಬಿಟ್ಟು ತಮ್ಮ ಯುವಪೀಳಿಗೆಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದು ಅದರಲ್ಲಿ ಭರ್ಜರಿಯಾಗಿ ಯಶಸ್ವಿ ಆಗಿದ್ದಾರೆ.. ಮೊದಲು ಈ ಕುರಿತು ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ತಾವು ಎಳೆದುಕೊಂಡು ಹೋಗ್ತಿರುವ ತೇರನ್ನ ಮಕ್ಕಳು ಎಳೆಯಬೇಕು ಜನರ ಸೇವೆ ಮಾಡಬೇಕೆನ್ನುವ ಉದ್ದೇಶದಿಂದ ಚುನಾವಣೆಗೆ ನಿಲ್ಲಿಸಿದ್ದಾಗಿ ಹೇಳಿದ್ದರು.

ಇತ್ತ ತಾನು ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಎಂಟ್ರಿಯಾಗಿದ್ದಾರೆ. ಸಹಕಾರಿ ಸಂಘಗಳ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿದ್ದು ಜಾರಕಿಹೊಳಿ ಸಹೋದರರ ಮತ್ತೊಂದು ದಾಳ ಅಂತಾ ಹೇಳಲಾಗುತ್ತಿದ್ದು ಬಾಲಚಂದ್ರ ಜಾರಕಿಹೊಳಿ ಕೂಡ ರಾಜಕಾರಣದಲ್ಲಿ ಎಲ್ಲವೂ ಮಾಡಬೇಕು ಅಂತಾ ಹೇಳಿದ್ದಾರೆ.

ಒಟ್ಟಿನಲ್ಲಿ ಸಾಕಷ್ಟು ಜಿದ್ದಾಜಿದ್ದಿಗೆ ಕಾರಣವಾಗಿರುವ ಡಿಸಿಸಿ ಬ್ಯಾಂಕ್ ಚುನಾವಣೆಗೆ ಅಕ್ಟೋಬರ್ 19ರಂದು ಮತದಾನ ನಡೆಯಲಿದ್ದು ಈಗಾಗಲೇ ಆರು ತಾಲೂಕಿನಲ್ಲಿ ಪ್ರತಿಸ್ಪರ್ದಿಯಾಗಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆ ಅವಿರೋಧ ಆಯ್ಕೆ ಆಗಿವೆ. ಇತ್ತ ಜಾರಕಿಹೊಳಿ ಬ್ರದರ್ಸ್ ಕಡೆಯಿಂದ ಡಿಸಿಸಿ ಬ್ಯಾಂಕ್ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಲಿಂಗಾಯತ ಅಸ್ತ್ರ ಕೂಡ ಪ್ರಯೋಗ ಆಗಿದ್ದು ಇದರಿಂದ ತಮ್ಮ ಪೆನಲ್ ಗೆದ್ರೇ ಲಿಂಗಾಯತರೇ ಅಧ್ಯಕ್ಷ ಅಂತಾ ಬಾಲಚಂದ್ರ ಜಾರಕಿಹೊಳಿ ಹೇಳಿದ್ದು ಎಲ್ಲಾ ಸಮುದಾಯಗಳನ್ನು ವಿಸ್ವಾಸಕ್ಕೆ ತಗೆದುಕೊಂಡು ಹೋಗುವ ರಾಜನೀತಿ ಆಗಿದೆ..