ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ.

ಬೆಳಗಾವಿ : 2026-27ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಈ ಕೆಳಕಂಡ ಯೋಜನೆಗಳಲ್ಲಿ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳು : ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳು.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 30, 2026 ಕೊನೆಯ ದಿನಾಂಕವಾಗಿದೆ. ಈ ಮೇಲ್ಕಂಡ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪ್ರೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಳಗಾವಿ ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ www.dbcdc.karnataka.gov.in ವೆಬ್ಸೈಟ್ ಹಾಗೂ ನಿಗಮದ ದೂರವಾಣಿ ಸಂಖ್ಯೆ:080-22374832, 8050770004, 8050770005 ಗೆ ಹಾಗೂ ಬೆಳಗಾವಿ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ:0831-2402163ಗೆ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.