ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿ 25 ವರ್ಷಗಳು..
ಮುಖ್ಯಮಂತ್ರಿಯಿಂದ ಪ್ರಧಾನಮಂತ್ರಿವರೆಗೆ ಸಾರ್ವಜನಿಕ ಸೇವೆ ನಿಮಿತ್ತ ಸೇವಾ ಜ್ಯೋತಿ ಯಾತ್ರೆ..
ಬೆಳಗಾವಿ : ಜಿಲ್ಲಾ ಬಿಜೆಪಿಯ ಗ್ರಾಮಾಂತರ ಜಿಲ್ಲೆ, ಮಹಾನಗರ, ಚಿಕ್ಕೋಡಿಯ ಸಂಘಟನಾತ್ಮಕ ಜಿಲ್ಲೆಗಳ ವಿವಿಧ ತಾಲೂಕುಗಳಿಂದ ಆಗಮಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇವಾ ಜ್ಯೋತಿ ಯಾತ್ರೆ ಸ್ವಾಗತಿಸಿದರು ಅದೇರೀತಿ ವಿಕಸಿತ ಭಾರತ ಸಂಕಲ್ಪ ಸಮಾವೇಶದ ನರೇಂದ್ರ ಮೋದಿ ಅವರ ಭಾಷಣದ ನೇರಪ್ರಸಾರ ಕಾರ್ಯಕ್ರಮವನ್ನು ಎಲ್.ಇ.ಡಿ ಪರದೆ ಮೂಲಕ ಮುಖಂಡರು, ಸಾವಿರಾರು ಕಾರ್ಯಕರ್ತರು ವಿಕ್ಷಿಸಿದರು.

ಇದೇ ವೇಳೆ ಮುಖಂಡರು ನಗರದಲ್ಲಿ ಹೊಸದಾಗಿ ಸೇವಾ ಜ್ಯೋತಿ ವೃತ್ತವನ್ನು ಉದ್ಘಾಟನೆ ಗೊಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಸಂಸದರಾದ ಜಗದೀಶ ಶೆಟ್ಟರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ್, ಶಾಸಕರಾದ ಅಭಯ ಪಾಟೀಲ, ವಿಠ್ಠಲ ಹಲಗೇಕರ, ದುರ್ಯೋಧನ ಐಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಹಾನಗರ ಅಧ್ಯಕ್ಷರಾದ ಗೀತಾ ಸುತಾರ, ಮಾಜಿ ಸಂಸದರಾದ ಈರಣ್ಣ ಕಡಾಡಿ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ದೊಡಗೌಡರ, ಮಹಾಂತೇಶ ಕವಟಗಿಮಠ, ಅರವಿಂದ ಪಾಟೀಲ, ಮಹೇಶ ಕುಮಠಳ್ಳಿ, ಎಂ ಬಿ ಜಿರಲಿ ಮತ್ತು ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.