ಪ್ರಾದೇಶಿಕ ಮಟ್ಟದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ…

ಪ್ರಾದೇಶಿಕ ಮಟ್ಟದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ..

ಇಲಾಖೆಯ ಕೆಲಸ ಕಾರ್ಯದಲ್ಲಿ ವಿಳಂಬ ಬೇಡ..
ಸಚಿವ ಸಂತೋಷ ಲಾಡ್ ಸೂಚನೆ..

ಬೆಳಗಾವಿ : ಸಂತೋಷ್ ಲಾಡ್ ಮಾನ್ಯ ಕಾರ್ಮಿಕ ಸಚಿವರು ಇಂದು ಮದ್ಯಾಹ್ನ 11:45 ಕ್ಕೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಸಭಾ ಭವನದಲ್ಲಿ ಪ್ರಾದೇಶಿಕ ಮಟ್ಟದ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.

ಈ ಸಬೆಯಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಮೊಹಮ್ಮದ್ ಮೊಹಿಸಿನ್, ಕಾರ್ಮಿಕ ಆಯುಕ್ತರಾದ ಗೋಪಾಲ ಕೃಷ್ಣ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ಸಿಇಒ ಮತ್ತು ಕಾರ್ಯದರ್ಶಿ ಭಾರತಿ, ಜಂಟಿ ಕಾರ್ಮಿಕ ಆಯುಕ್ತರಾದ ಡಾ ಮಂಜುನಾಥ್, ಶ್ರೀನಿವಾಸ್, ನಿರ್ದೇಶಕರು, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ, ಕಾರಾವಿ ನಿರ್ದೇಶಕರಾದ ವರದರಾಜು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಈ ಸಬೆಯಲ್ಲಿ ಪಾಲ್ಗೊಂಡಿದ್ದರು.

ಈ ಸಬೆಯಲ್ಲಿ ಇಲಾಖೆಯನ್ನು ಚುರುಕುಗೊಳಿಸುವ ಬಗ್ಗೆ ಮತ್ತು ಕಾರ್ಮಿಕರ ಒಳಿತಿಗಾಗಿ ಕೈಗೊಳ್ಳಬೇಕಾದ ಮುಂದಿನ ಕ್ರಮಗಳು, ಕಾರ್ಮಿಕ ಇಲಾಖಾ ಕೋರ್ಟ್ ಕೇಸುಗಳನ್ನು ಇತ್ಯರ್ಥಗೊಳಿಸುವ ಬಗ್ಗೆ ಮತ್ತು ಸೆಸ್ ಕಲೆಕ್ಷನ್ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ವರದಿ ಪ್ರಕಾಶ ಕುರಗುಂದ.