ಬೀದರದಿಂದ ಚಾಮರಾಜನಗರವರೆಗೆ ಮಾನವ ಸರಪಳಿ ನಿರ್ಮಿಸಿ ಸಂವಿಧಾನ ಜಾಗೃತಿ:
ಸಚಿವ ಸತೀಶ್ ಜಾರಕಿಹೊಳಿ…
ಬೆಳಗಾವಿ: “ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ನಿಮಿತ್ತ ಸೆ. 15 ರಂದು ಭಾರತದ ಸಂವಿಧಾನ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರಮ ಆಯೋಜಿಸಿದ್ದು, ಬೀದರದಿಂದ ಚಾಮರಾಜನಗರ ವರೆಗೆ ಒಂದು ಗಂಟೆಯಲ್ಲಿಯೇ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಜಾಗೃತಿ ಮೂಡಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ಉತ್ಸವದ ಪೂರ್ವ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಸೆ. 15 ರಂದು ಭಾರತದ ಸಂವಿಧಾನ ಪ್ರಸ್ತಾವನೆ ಓದುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದು ಯಾವುದೇ ಪಕ್ಷದ ಕಾರ್ಯಕ್ರಮವಲ್ಲ. ಈ ಕಾರ್ಯಕ್ರಮ ಎಲ್ಲಾ ಇಲಾಖೆಗಳ ಸಿಬ್ಬಂದಿ ವರ್ಗ, ಶಾಲಾ- ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ, ಗ್ರಾಮ ಪಂಚಾಯತ್, ಜಿಲ್ಲಾ, ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ ಆಚರಿಸಲಾಗುವುತ್ತದೆ ಎಂದರು.
ವರದಿ ಪ್ರಕಾಶ ಬಸಪ್ಪ ಕುರಗುಂದ..