ಬೀದಿ ಬದಿ ವ್ಯಾಪಾರಿಗಳು ಹಾಗೂ ಪಾಲಿಕೆ ಮಧ್ಯ ಸೌಹಾರ್ದತೆ ಅಗತ್ಯ..
ಮೇಯರ್ ಪ್ರೀತಿ ಕಾಮಕರ್..
ಬೆಳಗಾವಿ : ನಿಯಮಗಳನ್ನು ಪಾಲಿಸಿ ಸಾರ್ವಜನಿಕರ ಹಿತ ಕಾಪಾಡ ಬೇಕಾಗಿರುವುದರಿಂದ
ಬೀದಿ ಬದಿ ವ್ಯಾಪಾರಿಗಳು ಪಾಲಿಕೆಗೆ ಸಹಕಾರ ನೀಡಿ ಸೌಹಾರ್ದತೆ ಕಾಪಾಡಿಕೊಳ್ಳಬೇಕೆಂದು ಮೇಯರ್ ಪ್ರೀತಿ ಕಾಮಕರ್ ಹೇಳಿದರು.
ಮಂಗಳವಾರ ಮಹಾನಗರ ಪಾಲಿಕೆಯಲ್ಲಿ ನಡೆದ ತಾತ್ಕಾಲಿಕ ಪಟ್ಟಣ ಮಾರಾಟ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಪಾದಚರಿ ಮಾರ್ಗವನ್ನು ಸಂಚಾರಕ್ಕಾಗಿ ಮುಕ್ತಗೊಳಿಸುವ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶವಿದೆ. ಈ ಹಿನ್ನೆಲೆಯಲ್ಲಿ ನಿಯಮವನ್ನು ಪಾಲಿಸಬೇಕು, ಬೀದಿಬದಿ ವ್ಯಾಪಾರಿಗಳ ಹಿತವನ್ನೂ ಕಾಪಾಡಬೇಕಾಗಿರುವುದರಿಂದ ನಗರ ಸೇವಕರು, ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ಸಹಕಾರದಿಂದ ವರ್ತಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕೆಂದು ಹೇಳಿದರು.
ಉಪಮೇಯರ್ ಹನುಮಂತ ಕೊಂಗಾಲಿ ಮಾತನಾಡಿ, ವ್ಯಾಪಾರಿಗಳು ನಿಯಮಗಳನ್ನು ಪಾಲಿಸಿ ಸಹಕಾರ ನೀಡುವುದರ ಮೂಲಕ ಕೇಂದ್ರ, ರಾಜ್ಯ ಸರ್ಕಾರದ ಹಾಗೂ ಪಾಲಿಕೆಯ ಸೌಲಭ್ಯಗಳನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಆಯುಕ್ತ ಕಾರ್ತಿಕ್ ಎಂ. ಅವರು ಮಾತನಾಡಿ,
ವ್ಯಾಪಾರಕ್ಕಾಗಿ ಸ್ಥಳ ಪರಿಶೀಲಿಸಿ ಸಾಧಕ ಬಾಧಕಗಳನ್ನು ಚರ್ಚಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಇಷ್ಟರಲ್ಲೇ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದೆಂದು ಹೇಳಿದರು.
ಸಮಿತಿ ಸದಸ್ಯರು ಹಲವಾರು ಸಮಸ್ಯೆಗಳನ್ನು ಹೇಳಿಕೊಂಡರು. ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ ಮೈಲುಗೋಳ, ರಾಜು ಭಾತಕಾಂಡೆ, ಶ್ರೇಯಸ ನಾಕಾಡಿ ಹಾಗೂ ನಗರ ಸೇವಕರಾದ ಸವಿತಾ ಕಾಂಬಳೆ, ಗಿರೀಶ ಧೋಂಗಡಿ , ಪಾಲಿಕೆ ಅಭಿವೃದ್ಧಿ ವಿಭಾಗದ ಉಪ ಆಯುಕ್ತೆ ಲಕ್ಷ್ಮೀ ನಿಪ್ಪಾಣಿಕರ್, ಆಡಳಿತ ವಿಭಾಗದ ಉಪ ಆಯುಕ್ತ ಉದಯಕುಮಾರ ಟಿ.ಬಿ.,
ನಗರ ಯೋಜನಾಧಿಕಾರಿ ವಾಹಿದ ಅಖ್ತರ್, ಅಭಿಯಂತರ ಅನೂಪ, ಸಿಎಓ ಗೀತಾ, ಪಟ್ಟಣ ಮಾರಾಟ ಸಮಿತಿ ಪದಾಧಿಕಾರಿಗಳಾದ ಶ್ರೀಪಾದ್ ಹೋಳ್ಕರ್, ಮೊಹಮ್ಮದ್ ಅಲಿ ಭಾಗವಾನ್, ವಿಜಯ ಚೌಹಾನ್, ಚಂದ್ರವ್ವ ದೇಸೂರಕರ್ ಇತರರು ಉಪಸ್ಥಿತರಿದ್ದರು.