ಬುಡಕಟ್ಟು ಸಮುದಾಯದ ಕುಂದುಕೊರತೆ ಆಲಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ…

ಸಮುದಾಯದ ಸಮಸ್ಯೆ ಆಲಿಸಿ ಪರಿಹಾರ ಹಾಗೂ ಸೌಲಭ್ಯ ಕಲ್ಪಿಸಿದ್ದೇವೆ..

ಬಸವರಾಜ ಕುರಿಹುಲಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ..

ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲ್ಲೂಕಿನ ಭೂರಣಕಿ ಗ್ರಾಮದಲ್ಲಿ ವಾಸವಿರುವ ಸಿದ್ದಿ ಸಮುದಾಯದ ಜನಾಂಗದ ನೆಲೆಗೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಮಾರ್ಗದರ್ಶನದ ಮೇರೆಗೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಭೇಟಿ ನೀಡಿ, ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ..

ದಿನಾಂಕ 14/03/2024ರಂದು ಸಮಾಜ ಕಲ್ಯಾಣ ಇಲಾಖೆಯ ಖಾನಾಪುರ ತಾಲೂಕು ಸಹಾಯಕ ನಿರ್ದೇಶಕರೊಂದಿಗೆ ಸ್ಥಳಕ್ಕೆ ಬೇಟಿ ನೀಡಿದ ಅಧಿಕಾರಿಗಳು, ಅವರ ಕೆಲವು ಮೂಲಭೂತ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಿ, ಮುಂಬರುವ ದಿನಗಳಲ್ಲಿ ಹತ್ತು ಹಲವಾರು ಸೌಲಭ್ಯ ಒದಗಿಸುವ ಸಿದ್ಧತೆ ಮಾಡಿಕೊಂಡಿರುವ ಮಾಹಿತಿಯಿದೆ..

ಈ ಸಭೆಯಲ್ಲಿ ಸಮುದಾಯದ ಪ್ರಮುಖರು ಭಾಗಿಯಾಗಿದ್ದು, ವಾಸಿಸಲು ಪಕ್ಕಾ ಮನೆಗಳು, ಕುಡಿಯುವ ನೀರಿನ ವ್ಯವಸ್ಥೆ, ವ್ಯವಸಾಯಕ್ಕಾಗಿ ಸರ್ಕಾರಿ ಭೂಮಿ, ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಆರೋಗ್ಯ ಸೇವೆ, ಕ್ರೀಡಾ ಸೌಲಭ್ಯ, ವಸತಿ ನಿಲಯಗಳ ವ್ಯವಸ್ಥೆ ಇನ್ನಿತರ ಬೇಡಿಕೆಗಳನ್ನು ನೀಡಿದ್ದು,

ಅಧಿಕಾರಿಗಳು ಸಮುದಾಯದ ಸಮಸ್ಯೆಗಳನ್ನು ಆಲಿಸಿದ್ದು, ಶೀಘ್ರದಲ್ಲೇ ಅವೆಲ್ಲವನ್ನೂ ಪರಿಹರಿಸುವ ಮೂಲಕ ಬುಡಕಟ್ಟು ಸಮುದಾಯದ ಸರ್ವಾಂಗೀಣ ಏಳಿಗೆಗಾಗಿ ಇಲಾಖೆ ನಿರಂತರವಾಗಿ ಕಾರ್ಯನಿರ್ವಹಿಸುತ್ತದೆ ಎಂಬ ಮಾಹಿತಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಬಸವರಾಜ ಕುರಿಹುಲಿ ಅವರು ನೀಡಿದ್ದಾರೆ..

ವರದಿ ಪ್ರಕಾಶ್ ಕುರಗುಂದ..