ಬೆಳಗಾವಿ – ಗೋವಾ ಹೆದ್ದಾರಿ ದುರಸ್ತಿ ಕಾಮಗಾರಿಗೆ ಚಾಲನೆ..
ಬೆಳಗಾವಿ :
ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಶನಿವಾರ (ಫೆ.24) ಖಾನಾಪುರ ತಾಲ್ಲೂಕಿನ ಕಣಕುಂಬಿಯಲ್ಲಿ ಬೆಳಗಾವಿ-ಚೋರ್ಲಾ-ಗೋವಾ ಗಡಿಯವರೆಗಿನ ರಾಜ್ಯ ಹೆದ್ದಾರಿ -748ಎ ದುರಸ್ತಿ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಖಾನಾಪುರ ಶಾಸಕ ವಿಠ್ಠಲ್ ಹಲಗೇಕರ, ಬೆಳಗಾವಿ ಉತ್ತರದ ಶಾಸಕರಾದ ರಾಜು ಸೇಠ್, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ ಪ್ರಕಾಶ ಕುರಗುಂದ…