ಬೆಳಗಾವಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ 2025..
ಶುಕ್ರವಾರ ಮತ್ತು ಶನಿವಾರದಂದು ಕ್ರೀಡಾ ಮತ್ತು ಸಾಂಸ್ಕೃತಿಕ ಕಲರವ..
ಬೆಳಗಾವಿ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಬೆಳಗಾವಿಯ ಇವರುಗಳ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು 2025 ಜರುಗಲಿವೆ.
ಇದೇ ಶುಕ್ರವಾರ ಹಾಗೂ ಶನಿವಾರ ದಿನಾಂಕ 07/03/2025 ಹಾಗೂ 08/03/2025 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಈ ಸ್ಪರ್ಧೆಗಳು ಆಯೋಜನೆ ಗೊಂಡಿದ್ದು, ಶುಕ್ರವಾರ ಮುಂಜಾನೆ 10-30ಕ್ಕೆ ಬೆಳಗಾವಿಯ ಜಿಲ್ಲಾಧಿಕಾರಿಗಳದ ಮೊಹಮ್ಮದ್ ರೋಷನ್ ಈ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟನೆ ಮಾಡುವರು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳದ ರಾಹುಲ್ ಶಿಂಧೆ ಕ್ರೀಡಾ ಜ್ಯೋತಿಯ ಸ್ವೀಕಾರ ಮಾಡುವರು, ಇನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ ಭೀಮಾಶಂಕರ ಎಸ್ ಗುಳೇದ ಕ್ರೀಡಾ ದ್ವಾಜಾರೋಹಣ ನೆರವೇರಿಸುವರು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಬಸವರಾಜ ರಾಯವ್ವಗೋಳ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಬಿ ಎ ಕುಂಬಾರ ಅವರು ವಹಿಸಲಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ವಿನಯಕುಮಾರ ಹೋಣಕೆರಿ, ಎನ್ ಮುರಳಿ, ಜಿಪಂ ಉಪ ಕಾರ್ಯದರ್ಶಿಗಳಾದ ಬಸವರಾಜ ಹೆಗ್ಗನಾಯಕ, ಜಿಪಂ ಮುಖ್ಯ ಲೆಕ್ಕಾಧಿಕಾರಿಗಳಾದ ಪರಶುರಾಮ ದುಡಗುಂಟಿ ಹಾಗೂ ಬೆಳಗಾವಿ ತಹಶೀಲ್ದಾರರಾದ ಬಸವರಾಜ ನಾಗರಾಳ ಅವರೆಲ್ಲ ಘನ ಉಪಸ್ಥಿತರಿರುವರು..
ಈ ಎರಡು ದಿನಗಳ ಕಾಲ ನಡೆಯುವ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಖುಷಿಯಿಂದ ಭಾಗಿಯಾಗಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಬಿ ಶ್ರೀನಿವಾಸ, ಉಪನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ಇವರು ಕೇಳಿಕೊಂಡಿದ್ದಾರೆ.
ವರದಿ ಪ್ರಕಾಶ ಬಸಪ್ಪ ಕುರಗುಂದ..