ಬೆಳಗಾವಿ ಜಿಲ್ಲೆಯಲ್ಲಿ ಸದ್ಯಕ್ಕಿಲ್ಲ ಕುಡಿಯುವ ನೀರಿನ ಸಮಸ್ಯೆ..

ಬೆಳಗಾವಿ ಜಿಲ್ಲೆಯಲ್ಲಿ ಸದ್ಯಕ್ಕಿಲ್ಲ ಕುಡಿಯುವ ನೀರಿನ ಸಮಸ್ಯೆ..

ಸಮಸ್ಯೆ ಉಂಟಾದರೆ ಟ್ಯಾಂಕ್ ಮೂಲಕ ನೀರು ಪೂರೈಕೆ..

ಸಚಿವ ಸತೀಶ್‌ ಜಾರಕಿಹೊಳಿ..

ಬೆಳಗಾವಿ : ಜಿಲ್ಲೆಯಲ್ಲಿ ಎಲ್ಲಿಯೂ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲಾ, ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಆಯಾ ಗ್ರಾಪಂ ಮಟ್ಟದಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸುತ್ತಾರೆ, ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ಸ್ವಂತ ನೀರಿನ ಟ್ಯಾಂಕರ್‌ಗಳಿದ್ದು ಅವುಗಳಿಂದ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲೆಯ ಎಲ್ಲಾ ತಾಲೂಕಗಳ ತಹಶೀಲ್ದಾರ್‌ ಗಳಿಗೆ ಸೂಚನೆ ನೀಡಲಾಗಿದೆ. ನೀರಿನ ಟ್ಯಾಂಕರ್‌ ಇಲ್ಲದ ಗ್ರಾಪಂ ಗಳು ಟ್ಯಾಂಕರ್‌ ಗಳನ್ನು ಖರೀದಿಸಬೇಕು. ಸದ್ಯಕ್ಕೆ ನೀರಿನ ಸಮಸ್ಯೆ ಉದ್ಬವಿಸಿಲ್ಲ. ಏಪ್ರೀಲ್‌ ನಂತರ ನೀರಿನ ಸಮಸ್ಯೆ ಉದ್ಬವಿಸಬಹುದು ಎಂದು ತಿಳಿಸಿದರು.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ, ಅವರ ಕುಟುಂಬಸ್ಥರಿಗೆ ಟಿಕೆಟ್‌ ನೀಡಲಾಗುವುದು ಎಂದು ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಿಸುಲು ಈಗಾಗಲೇ ಸಿದ್ದತೆ ನಡೆಸಿದ್ದೇವೆ. ಹೈಕಮಾಂಡ್, ಕ್ಷೇತ್ರದ ಮತದಾರರ, ಕುಟುಂಬದ ಒಮ್ಮತದ ಆಧಾರದ ಮೇಲೆ ಅಂತಿಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೆಳಗಾವಿ ಜಿಲ್ಲೆಗೆ ದೊರುಕತ್ತಿದೆ ಎಂಬ ಚರ್ಚೆ ನಡೆಯುತ್ತಿವೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಬೇಕೆಂದು ಹೈಕಮಾಂಡ್‌ ಗೆ ಹೇಳಿದ್ದೇವೆ. ಅವರೇ ಈ ಹೊಂದಲ ಬಗೆಹರಿಸುತ್ತಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೆಳಗಾವಿ ಜಿಲ್ಲೆಗೆ ದೊರಕುವ ಬಗ್ಗೆ ಚರ್ಚೆ ನಡೆದಿಲ್ಲ. ಕೆಪಿಸಿಸಿ ಸ್ಥಾನ ಸಿಕ್ಕಾಗ ಸಂತೋಷ ಪಡೋಣ ಎಂದರು.

ಮಹಾರಾಷ್ಟ್ರದಿಂದ 2 ಟಿಎಂಸಿ ನೀರು ಬಿಡುಗಡೆಗೆ ಮನವಿ : ಹಿಪ್ಪರಗಿ ಬ್ಯಾರೇಜ್‌ನ 22ನೇ ಕ್ರಸ್ಟ್ ಗೇಟ್ ಮುರಿದು ಬಿದ್ದ ಪರಿಣಾಮ ಕೃಷ್ಣಾ ನದಿಯ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಪೋಲಾಗಿದೆ. ಸುಮಾರು 2 ರಿಂದ 3 ಟಿಎಂಸಿ ಅಡಿ ನೀರು ಹರಿದು ಹೋಗಿದೆ. ಆದ್ದರಿಂದ ನೀರಿನ ಕೊರತೆ ನೀಗಿಸಲು ಮಹಾರಾಷ್ಟ್ರ ಸರ್ಕಾರದಿಂದ ಸುಮಾರು 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ವಿನಂತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.

ಬೆಳಗಾವಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಮ್ಯಾಪಿಂಗ್ ಪ್ರಕ್ರಿಯೆ: ಪ್ರಸ್ತುತ ಜಾರಿಯಲ್ಲಿದ್ದು, ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 85 % ರಷ್ಟು ಕಾರ್ಯ ಪೂರ್ಣಗೊಂಡಿದೆ. ಸುಮಾರು 92 % ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯ ಮಾಡುವ ಗುರಿ ಮುಟ್ಟಲು ಅಧಿಕಾರಿಗಳಿಗೆ ತಿಳಿಸಿದ್ದಾಗಿ ಹೇಳಿದರು.
ಮಹಾನಗರ ಪಾಲಿಕೆಯ ಸಭೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಸುಮಾರು 60 ಸಾವಿರ ಮತದಾರರು ಕಾಣೆಯಾಗಿರುವ ಬಗ್ಗೆ ಕೇಳಿ ಬಂದ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು , ಇನ್ನು ಪ್ರಕ್ರಿಯೆ ನಡೆಯುತ್ತಿದೆ, ಮೂರು ಬಾರಿ ಮನೆಗೆ ಹೋಗಿ ಪರಿಶೀಲಿಸಲಾಗುತ್ತಿದೆ. ಮತದಾರರನ್ನು ಹುಡುಕುವುದು ಅಧಿಕಾರಿಗಳ ಜವಾಬ್ದಾರಿ. ಮುಂದಿನ ವಾರ ಮತ್ತೊಂದು ಸಭೆ ಕರೆಯಲಾಗಿದೆ ಎಂದರು.

ಜಿಲ್ಲಾಡಳಿತ ಕಚೇರಿ ಕಾಮಗಾರಿ ಪರಿಶೀಲನೆ: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ನಡೆಯುತ್ತಿರುವ ನೂತನ ಜಿಲ್ಲಾಡಳಿತ ಭವನ ಮತ್ತು ನವೀಕರಣ ಕಾಮಗಾರಿಗಳನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು.
ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಅವರಿಂದ ಜಿಲ್ಲಾಡಳಿತ ಭವನದ ನವೀಕರಣ ಕಾಮಗಾರಿ ಬಗ್ಗೆ ಮಾಹಿತಿ ಪಡೆದು ಕಾಮಗಾರಿಯನ್ನು ಇನ್ನಷ್ಟು ಚುರುಕುಗೊಳಿಸಲು ಸೂಚಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ್‌ ಸಿಇಓ ರಾಹುಲ್‌ ಸಿಂಧೆ, ಬೆಳಗಾವಿ ಪೊಲೀಸ್‌ ಆಯುಕ್ತ ಭೂಷಣ್ ಗುಲಾಬರಾವ್ ಬೋರಸೆ ಸೇರಿದಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇತರರು ಇದ್ದರು.