ಬೆಳಗಾವಿ ನಗರ ಜಿಲ್ಲಾ ಕಾಂಗ್ರೆಸ್ ಕಮಿಟಿ ಕಾರ್ಮಿಕ ಘಟಕದಿಂದ ಕಾರ್ಮಿಕ ದಿನಾಚರಣೆ..

ಬೆಳಗಾವಿ ನಗರ ಜಿಲ್ಲಾ ಕಾಂಗ್ರೆಸ್ ಕಮಿಟಿ ಕಾರ್ಮಿಕ ಘಟಕದಿಂದ ಕಾರ್ಮಿಕ ದಿನಾಚರಣೆ..

ಜಿಲ್ಲಾ ಆಸ್ಪತ್ರೆಯ ಕಾರ್ಮಿಕರಿಗೆ ಸ್ನೇಹಕೂಟ ಹಾಗೂ ಅತ್ಯುತ್ತಮ ಸೇವಾ ಪ್ರಶಸ್ತಿ..

ಬೆಳಗಾವಿ ನಗರ ಜಿಲ್ಲಾ ಕಾಂಗ್ರೆಸ್ ಕಮಿಟಿಯ ಕಾರ್ಯಾಧ್ಯಕ್ಷೇಯಾದ ಭಾರತಿ ಡವಳ ನೇತೃತ್ವದ ಯಶಸ್ವಿ ಕಾರ್ಯಕ್ರಮ..

ನಮ್ಮ ಕಾಂಗ್ರೆಸ್ ಸರ್ಕಾರ ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮ ತಂದಿದೆ..

ಶಾಸಕ ಆಶೀಫ (ರಾಜು) ಸೇಠ್.

ಬೆಳಗಾವಿ : ಬೆಳಗಾವಿ ನಗರ ಜಿಲ್ಲಾ ಕಾಂಗ್ರೆಸ್ ಕಮಿಟಿ, ಕಾರ್ಮಿಕ ಘಟಕ ವತಿಯಿಂದ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಜಿಲ್ಲಾಸ್ಪತ್ರೆಯ ಕಾರ್ಮಿಕರಿಗೆ ಸ್ನೇಹ ಕೂಟ್ ಹಾಗೂ ಅತ್ಯುತ್ತಮ ಸೇವಾ ಪ್ರಶಸ್ತಿ ಸತ್ಕಾರ ಸಮಾರಂಭ ಆಯೋಜಿಸಲಾಗಿತ್ತು.

ಬೆಳಗಾವಿ ನಗರದ ಬಿಮ್ಸ್ ಆವರಣದಲ್ಲಿ ಇರುವ ಸಭಾ ಭವನದಲ್ಲಿ ಈ ಭವ್ಯವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಆಸೀಫ್ ಸೇಠ್ ಅವರು, ಕಾರ್ಮಿಕರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಇಂದು ನಮ್ಮ ಎಲ್ಲರ ಆರೋಗ್ಯ ಚೆನ್ನಾಗಿ ಇದೆ. ಎಲ್ಲಾ ವಿಭಾಗದ ಕಾರ್ಮಿಕರಿಂದ ದೇಶದ ಪ್ರಗತಿ ಆಗುತ್ತಿದೆ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಎಲ್ಲ ಬಡವರು ಹಾಗೂ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿದೆ. ಬೆಳಗಾವಿ ಪಾಲಿಕೆ ವ್ಯಾಪ್ತಿಯ ಸುಮಾರು 400 ಕಾರ್ಮಿಕರನ್ನು ಖಾಯಂ ಮಾಡಿದ್ದೇವೆ. ಗುತ್ತಿಗೆದಾರರಾದ ಬಂಗಾರೆಯವರು ಉತ್ತಮ ಕೇಸಲ ಮಾಡುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಕಾರ್ಮಿಕರಿಗೆ ಲಾಭವಾಗುವ ಕಾರ್ಯ ಮಾಡಿಕೊಡುತ್ತಿದ್ದಾರೆ. 17 ಸಾವಿರ ಇದ್ದ ಕಾರ್ಮಿಕರ ಕನಿಷ್ಟ ವೇತನವನ್ನು 25 ಸಾವಿರಕ್ಕೆ ಏರಿಸಿದ್ದಾರೆ ಎಂದರು.

ಇದೇ ವೇಳೆ ಬಿಮ್ಸ್ ಆಸ್ಪತ್ರೆಯಲ್ಲಿ ಸುಮಾರು 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಅತ್ಯುತಮ ಸೇವಾ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.

ಬೆಳಗಾವಿ ನಗರ ಜಿಲ್ಲಾ ಕಾಂಗ್ರೆಸ್ ಕಮಿಟಿಯ ಕಾರ್ಯಧ್ಯಕ್ಷರಾದ ಭಾರತಿ ಢವಳ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಮಿಕ ದಿನಾಚರಣೆಯ ಕಾರ್ಯಕ್ರಮದಲ್ಲಿ, ಶಾಸಕರಾದ ಆಶಿಫ್ (ರಾಜು) ಸೇಠ್, ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ಸೇವಾದಾಳದ ಜಿಲ್ಲಾಧ್ಯಕ್ಷ ಶಕೀಲ ಮುಲ್ಲಾ, ಗುತ್ತಿಗೆದಾರರದ ಅಣ್ಣಾಸಾಹೇಬ ಬಂಗಾರೆ, ಕಾಂಗ್ರೆಸ್ ಕಾರ್ಯಕರ್ತೆ ಕಸ್ತೂರಿ ಕೊಲ್ಕಾರ, ಅನ್ನಪೂರ್ಣ ಹಾಗೂ ಜಿಲ್ಲಾಸ್ಪತ್ರೆಯ ನೂರಾರು ಕಾರ್ಮಿಕರು ಭಾಗಿಯಾಗಿದ್ದು ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಸ್ನೇಹ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

ವರದಿ ಪ್ರಕಾಶ್ ಬಸಪ್ಪ ಕುರಗುಂದ..