ಬ್ಯಾಂಕ್ ಲಾಕರನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳ್ಳತನ..
ಆರೋಪಿಯನ್ನು ಬಂಧಿಸಿದ ಟಿಳಕವಾಡಿ ಪೊಲೀಸರು..
ಬೆಳಗಾವಿ : ಇಂಡಿಯನ್ ಬ್ಯಾಂಕ್ ಲಾಕರನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಟಿಳಕವಾಡಿ ಪೊಲೀಸರು ಬಂಧಿಸಿರುವ ಘಟನೆ ಶುಕ್ರವಾರ ನಡೆದಿದೆ.
ಚಂದ್ರಕಾಂತ ಚೋರ್ಲಿ (32) ಬಂಧಿತ ಆರೋಪಿ. ಬಂಧಿತನಿಂದ 14 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡು ಆರೋಪಿಯನ್ನು ನ್ಯಾಯಾಲಯ ಬಂಧನಕ್ಕೆ ಹಾಜರುಪಡಿಸಿದ್ದಾರೆ. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿಯ ಶೋಧ ಕಾರ್ಯಾಚರಣೆಗೆ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ವಿಶೇಷ ತಂಡ ರಚನೆ ಮಾಡಿದ್ದರು. ಟಿಳಕವಾಡಿ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.