ಮಕ್ಕಳ ಮತ್ತು ಮಹಿಳೆಯರ ಕಳ್ಳ ಸಾಗಾಣಿಕೆ ಕುರಿತು ಬೆಳಗಾವಿಯಲ್ಲಿ ಜಾಗೃತಿ ಜಾಥಾ..
ಬೆಳಗಾವಿ : ಬೆಳಗಾವಿ ಜಿಲ್ಲಾ ಕಾನೂನುಗಳ ಸೇವಾ ಪ್ರಾಧಿಕಾರದಿಂದ
ಮಕ್ಕಳ ಮತ್ತು ಮಹಿಳೆಯರ ಕಳ್ಳ ಸಾಗಾಣಿಕೆ ಜಾಗೃತಿ ಜಾಥಾ
ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಭಾಗಿ
ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಿಂದ ಚಾಲನೆ ನೀಡಲಾಯಿತು.
ಮಕ್ಕಳ ಮತ್ತು ಮಹಿಳೆಯರ ಕಳ್ಳ ಸಾಗಾಣಿಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನಗರದಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.

ಸೋಮವಾರ ಬೆಳಗಾವಿ ಮಹಾನಗರದಲ್ಲಿ ಬೆಳಗಾವಿ ಜಿಲ್ಲಾ ಕಾನೂನುಗಳ ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಮತ್ತು ಮಹಿಳೆಯರ ಕಳ್ಳ ಸಾಗಾಣಿಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಜಾಥಾಗೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಿಂದ ಚಾಲನೆ ನೀಡಲಾಯಿತು ಜಾಥಾದಲ್ಲಿ ಭಾಗವಹಿಸಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಬೆಳಗಾವಿ ಮಹಾನಗರದ ಚನ್ನಮ್ಮ ವೃತ್ತ, ಕಾಲೇಜು ರಸ್ತೆ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಮಕ್ಕಳ ಮತ್ತು ಮಹಿಳೆಯರ ಕಳ್ಳ ಸಾಗಾಣಿಕೆ ಕುರಿತು ಅರಿವು ಮೂಡಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಸಂದೀಪ ಪಾಟೀಲ ಮಾತನಾಡಿ, ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಜಾಥಾಗೆ ಚಾಲನೆ ನೀಡಿದರು ಕಾನೂನು ಸೇವಾ ಪ್ರಾಧಿಕಾರದಿಂದ ಜಾಥಾ ಹಮ್ಮಿಕೊಂಡಿದ್ದೇವೆ ಇದರ ಮುಖ್ಯ ಉದ್ದೇಶ ಮಕ್ಕಳ ಮತ್ತು ಮಹಿಳೆಯರ ಕಳ್ಳ ಸಾಗಾಣಿಕೆ ನಡೆಯುತ್ತಿದೆ ಅದನ್ನು ತಡೆಯಲ್ಲಿಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಾಗಿದೆ ಇವತ್ತಿನ ದಿವಸ ಮಕ್ಕಳ ಮತ್ತು ಮಹಿಳೆಯರ ಕಳ್ಳ ಸಾಗಾಣಿಕೆ ಯಾಕೆ ನಡೆಯುತ್ತಿದೆ ಎಂದರೆ ವೈಶ್ಯಾವಾಟಿಕೆ ನಡೆಸಲ್ಲಿಕೆ ಮತ್ತು ಮಕ್ಕಳ, ಮಹಿಳೆಯರ ಅಂಗಾಂಗಗಳ ಕಳ್ಳತನಕ್ಕೆ ಮತ್ತು ಬೀಕ್ಷಾಟನೆ, ಕೆಲಸಕ್ಕೆ ತೆಗೆದುಕೊಳ್ಳಲು ಬೇರೆ ಬೇರೆ ರಾಜ್ಯಗಳಿಗೆ ಮರಾಟ ಮಾಡುವುದನ್ನು ನಾವು ಸನ್ನಿವೇಶನಗಳನ್ನು ಕಂಡಿದ್ದೇವೆ ಸಾರ್ವಜನಿಕರು ತಮ್ಮ ಮಕ್ಕಳನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಬೇರೆಯವರಿಗೆ ತೊಂದರೆಯಾಗುತ್ತಿದ್ದರೆ ನಾವು ಕಣ್ಣು ಮುಚ್ಚಿಕೊಳಿತು ಕೊಳ್ಳುವ ಮನಸ್ಥಿತಿಯನ್ನು ಹೋಗಲಾಡಿಸಬೇಕಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚೇತನಕುಮಾರ್, ಬೆಳಗಾವಿ ಗ್ರಾಮೀಣ ಶಿಶು ಅಭಿವೃದ್ಧಿ ಅಧಿಕಾರಿ ಸುಮಿತ್ರಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪೊಲೀಸ ಸಿಬ್ಬಂದಿ ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.