ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅವ್ಯವಹಾರ ತನಿಖೆಯಾಗಲಿ..

ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅವ್ಯವಹಾರ ತನಿಖೆಯಾಗಲಿ..

ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ಮನವಿ..

ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಕಳೆದ 2018ರಿಂದ ಇಲ್ಲಿಯವರೆಗೂ ಸಾಕಷ್ಟು ಭ್ರಷ್ಟಾಚಾರ ನಡೆಸಿದ್ದಾರೆ, ಈಗಾಗಲೇ ಲೋಕಾಯುಕ್ತದಲ್ಲಿ ದೂರು ದಾಖಲಾಗಿ ತನಿಖೆಯನ್ನು ನಡೆಸಲಾಗುತ್ತಿದೆ‌ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕಳೆದ ಮೂರು ವರ್ಷದಲ್ಲಿ ಮಲ್ಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಲೋಕಾಯುಕ್ತ ಹಾಗೂ ಸರಕಾರಕ್ಕೆ ದಾಖಲೆ ನೀಡಲಾಗಿದೆ.

ಇದರಲ್ಲಿ ಸುಮಾರು 72 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು ಇದರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ವೇಳೆ ಬೀರಪ್ಪ ದೆಸನೂರು, ಬಸನಗೌಸ ಪಾಟೀಲ್ ಸೇರಿದಂತೆ ಇನ್ನಿತರ ರೈತರು ಉಪಸ್ಥಿತರಿದ್ದರು.