ಮಹಿಳಾ ಮತ್ತು ಮಕ್ಕಳ ಇಲಾಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.

ಮಹಿಳಾ ಮತ್ತು ಮಕ್ಕಳ ಇಲಾಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೂರು ಸಾವಿರ ಗರ್ಭಿಣಿಯರಿಗೆ ಸೀಮಂತದ ಉಡುಗೊರೆ..

ಸಚಿವೆ ಲಕ್ಸ್ಮಿ ಹೆಬ್ಬಾಳ್ಕರ..

ಬೆಳಗಾವಿ : ಗ್ರಾಮೀಣ ಮತಕ್ಷೇತ್ರದ ಸುಮಾರು ಮೂರು ಸಾವಿರ ಗರ್ಭಿಣಿಯರಿಗೆ ಸೀಮಂತದ ಉಡುಗೊರೆ ನೀಡುವ ಮೂಲಕ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅತ್ಯಂತ ವಿಶೇಷ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಸರ್ವ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ ಅವರು ತಿಳಿಸಿದ್ದಾರೆ.

ಸೋಮವಾರ ದಿನಾಂಕ 24/03/2025ರಂದು ನಗರದ ಸಿಪಿಎಡ್ ಆಟದ ಮೈದಾನದಲ್ಲಿ ಬೆಳಿಗ್ಗೆ 10-30ಕ್ಕೆ ಗಂಟೆಗೆ ಈ ವಿಶೇಷ ಹಾಗೂ ಅರ್ಥಪೂರ್ಣವಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟನೆ ಆಗುವದು, ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಸುಮಾರು ಮೂರು ಸಾವಿರ ಗರ್ಭಿಣಿಯರಿಗೆ ಸೀಮಂತದ ಸಂಭ್ರಮ, ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣೆ, ವಿಭಾಗೀಯ ಮಟ್ಟದ ಸ್ತ್ರೀ ಶಕ್ತಿ ಗುಂಪುಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ.

ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಹಕ್ಕುಗಳು, ಸಮಾನತೆ ಹಾಗೂ ಸಬಲೀಕರಣಕ್ಕಾಗಿ ತ್ವರಿತ ಕ್ರಮ ಎಂಬ ಧ್ಯೇಯೋದ್ದೇಶವನ್ನು ಹೊಂದಿರುವ ಈ ಕಾರ್ಯಕ್ರಮವನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಉದ್ಘಾಟನೆ ಮಾಡಲಿದ್ದಾರೆ.

ಮಹಿಳಾ ಇಲಾಖೆಯ ಸಚಿವರು ಲಕ್ಷ್ಮಿ ಹೆಬ್ಬಾಳಕರ ಅವರೇ
ಆಗಿರುವದರಿಂದ ತಮ್ಮ ಜಿಲ್ಲೆಯ, ತಮ್ಮ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಮಹಿಳಾ ಪೋಷಣ ಮಾಶಾಸನದ ಅಭಿಯಾನದ ಅಡಿಯಲ್ಲಿ ಈ ವಿಶೇಷ ಕಾರ್ಯಕ್ರಮವನ್ನು ಮಹಿಳಾ ಹಬ್ಬದಂತೆ ಸಂಭ್ರಮಿಸೋಣ, ಪ್ರಾಯೋಗಿಕವಾಗಿ ಮಾಡುವ ಈ ಕಾರ್ಯಕ್ರಮವು ಯಶಸ್ವಿಯಾದರೆ ಮತ್ತೆ ಮುಂದೆ ಹಲವು ಕಡೆ ಇಂತಹ ಕಾರ್ಯಕ್ರಮ ಹಾಕಿಕೊಳ್ಳುತ್ತೇವೆ ಎಂದಿದ್ದಾರೆ.
ವಿಭಾಗೀಯ ಮಟ್ಟದ ಸ್ತ್ರೀ ಶಕ್ತಿ ಸಂಘಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಆಯೋಜನೆ ಮಾಡಲಾಗಿದ್ದು, ಮಹಿಳೆಯರಿಗಾಗಿ ಮಾಡುತ್ತಿರುವ ಈ ಕಾರ್ಯಕ್ರಮ ಯಶಸ್ವಿ ಆಗಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಈ ಸುದ್ದಿಗೊಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಸಚಿವರ ಮಾಧ್ಯಮ ಸಲಹೆಗಾರ ಎಂ ಕೆ ಹೆಗಡೆ, ಇಲಾಖೆಯ ಉಪನಿರ್ದೇಶಕರು ಉಪಸ್ಥಿತರಿದ್ದರು..

ವರದಿ ಪ್ರಕಾಶ್ ಬಸಪ್ಪ ಕುರಗುಂದ.