ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನಿಧನ..

ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನಿಧನ..

ನಾಳೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಶತಮಾನೋತ್ಸವ ರದ್ದು..

ಬೆಳಗಾವಿ : ಮಾಜಿ ಪ್ರಧಾನಿ ಡಾ ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ , ಶುಕ್ರವಾರ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ರದ್ದಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ..

ಮಾಜಿ ಪ್ರಧಾನಿಗಳಿಗೆ ಸಂತಾಪ ಸೂಚಿಸುವದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಕಾರ್ಯಕ್ರಮ ರದ್ದುಪಡಿಸಿ, ಮುಂದಿನ ದಿನಗಳಲ್ಲಿ ಹೆಚ್ಚಿನ ವಿವರ ನೀಡುತ್ತೇವೆ ಎಂದಿದ್ದಾರೆ.

ಮಾಜಿ ಪ್ರಧಾನಿ ಹಾಗೂ ದೇಶದ ಖ್ಯಾತ ಆರ್ಥಿಕ ತಜ್ಞ ಡಾ ಮನಮೋಹನ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ರಾತ್ರಿ 9 ಕ್ಕೆ ನಿಧನ ಹೊಂದಿದ್ದಾರೆ..

ವರದಿ ಪ್ರಕಾಶ ಬಸಪ್ಪ ಕುರಗುಂದ…