ಕಡಿಮೆ ವೆಚ್ಚದಲ್ಲಿ ಜನತೆಗೆ ಉನ್ನತ ಮಟ್ಟದ ತಪಾಸಣೆ ಒದಗಿಸುವ ಉದ್ದೇಶ..
ಮೇ 24 ರಂದು ಕಾಮಾಖ್ಯಾ ಡೈಗ್ನೋಸ್ಟಿಕ್ ಸಂಶೋಧನಾ ಪ್ರಯೋಗಾಲಯ ಉದ್ಘಾಟನೆ.
ಬೆಳಗಾವಿ : ಕಾಮಾಖ್ಯಾ ಡೈಗ್ನೋಸ್ಟಿಕ್ ಮತ್ತು ಸಂಶೋಧನಾ ಪ್ರಯೋಗಾಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮೇ. 24ರಂದು ಬೆಳಗಾವಿಯ ಸದಾಶಿವನಗರದಲ್ಲಿ ನಡೆಯಲಿದೆ ಎಂದು ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ ಎಂ.ಕವೀಶ್ವರ ಅವರು ತಿಳಿಸಿದರು.
ಶುಕ್ರವಾರ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,
ಉತ್ತರ ಕರ್ನಾಟಕ ಭಾಗದ ಜನರಿಗೆ ಉನ್ನತ ಮಟ್ಟದ ಎಲ್ಲಾ ತಪಾಸನೆಗಳ ವೈದ್ಯಕೀಯ ವರದಿ ಸ್ಥಳೀಯವಾಗಿ ನಿಗದಿತ ಸಮಯದಲ್ಲಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ ನೂತನ ಕಾಮಾಖ್ಯಾ ಡೈಗ್ನೋಸ್ಟಿಕ್ ಮತ್ತು ಸಂಶೋಧನಾ ಪ್ರಯೋಗಾಲಯವನ್ನು ಆರಂಭಿಸಿದ್ದೇವೆ ಎಂದರು.
ಅಂದು ಬೆಳಗ್ಗೆ 11 30ಕ್ಕೆ ಉದ್ಘಾಟನಾ ಕಾರ್ಯಕ್ರಮ ನೆರವೇರಿಯಲ್ಲಿದ್ದು, ಕಾರಂಜಿ ಮಠದ ಗುರುಸಿದ್ಧ ಮಹಾಸ್ವಾಮಿಜಿಗಳು ಸಾನಿಧ್ಯ ವಹಿಸಲಿದ್ದಾರೆ.
ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಶಾಸಕರಾದ ಆಸೀಫ್ ಸೇಠ್, ಅಭಯ ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸರಕಾರದ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕಮಟಗಿಮಠ,
ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಡಿಸಿಪಿ ನಾರಾಯಣ ಭರಮನಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಐ.ಪಿ. ಗಡಾದ, ಬೀಮ್ಸ್ ನಿರ್ದೇಶಕ ಅಶೋಕ ಕುಮಾರ್ ಶೆಟ್ಟಿ ಉಪಸ್ಥಿತರಿರುವರು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪ್ರಯೋಗಾಲಯದ ಮಾರ್ಕೆಟಿಂಗ್ ಮತ್ತು ಆಪರೇಷನ್ಸ್ ನಿರ್ದೇಶಕ ಅನಿಲ ಪಾಟೀಲ ಉಪಸ್ಥಿತರಿದ್ದರು.