ಯಶಸ್ವಿಯಾಗಿ ಮುಕ್ತಾಯಗೊಂಡ ಎರಡು ದಿನದ ಕ್ರೀಡಾಹಬ್ಬ..

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ..

ಯಶಸ್ವಿಯಾಗಿ ಮುಕ್ತಾಯಗೊಂಡ ಎರಡು ದಿನದ ಕ್ರೀಡಾಹಬ್ಬ..

ಬೆಳಗಾವಿ : ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಿನ್ನೆ ಶುಕ್ರವಾರ ಪ್ರಾರಂಭವಾದ ಬೆಳಗಾವಿ ಜಿಲ್ಲಾ ಮಟ್ಟದ, ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಇಂದು ಶನಿವಾರ ಯಶಸ್ವಿಯಾಗಿ ಮುಕ್ತಾಯಗೊಂಡಿವೆ..

ಎರಡು ದಿನಗಳ ಕಾಲ ನಡೆದ ಈ ಕ್ರೀಡೋತ್ಸವದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ವಿವಿಧ ಇಲಾಖೆಗಳ ಕ್ರೀಡಾಪಟುಗಳು ಭಾಗಿಯಾಗಿದ್ದು, ಶಿಕ್ಷಣ, ಕಂದಾಯ, ಆರೋಗ್ಯ ಇಲಾಖೆಗಳ ಅತೀ ಹೆಚ್ಚು ಕ್ರೀಡಾಪಟುಗಳು ಭಾಗಿಯಾಗಿ ತಮ್ಮ ಕ್ರೀಡಾ ಪ್ರತಿಭೆ ಪ್ರದರ್ಶನ ಮಾಡಿದರು..

ರನ್ನಿಂಗ್, ಕಬಡ್ಡಿ, ಕೋಕೋ, ವಾಲಿಬಾಲ್, ಚೆಸ್, ಬ್ಯಾಡ್ಮಿಟನ್, ಈಜು ಸ್ಪರ್ಧೆ, ರಿಲೇ ಹೀಗೆ ಹಲವಾರು ಬಗೆಯ ಹೊರಾಂಗಣ ಹಾಗೂ ಒಳಾಂಗಣ ಕ್ರೀಡೆಗಳು ಜರುಗಿ, ಪ್ರತಿಯೊಬ್ಬರೂ ಅತ್ಯಂತ ಉತ್ಸಾಹದಿಂದ ಭಾಗಿಯಾಗಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದ್ದಾರೆ..

ಕ್ರೀಡಾಕೂಟಕ್ಕೆ ಆಗಮಿಸಿದ ಸಿಬ್ಬಂದಿಗಳಿಗೆ ಊಟ, ವಸತಿ, ಇನ್ನಿತರ ವ್ಯವಸ್ಥೆಗಳನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘ ಹಾಗೂ ಕ್ರೀಡಾ ಇಲಾಖೆ ಅತ್ಯಂತ ವ್ಯವಸ್ಥಿತವಾಗಿ ಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ..

ಒಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕ್ರೀಡಾ ಇಲಾಖೆ, ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ನಡೆದ ಈ ಕ್ರೀಡಾಕೂಟ ಅತ್ಯಂತ ಯಶಸ್ವಿಯಾಗಲು ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘಟನೆಯ ಪದಾಧಿಕಾರಿಗಳು ಕಾರಣರಾಗಿದ್ದಾರೆ..

ಈ ಸಂದರ್ಭದಲ್ಲಿ ಕ್ರೀಡಾ ಇಲಾಖೆಯ ಮಾನ್ಯ ಉಪ ನಿರ್ದೇಶಕರಾದ ಬಿ ಶ್ರೀನಿವಾಸ. ಹಾಗೂ ಬೆಳಗಾವಿ ಜಿಲ್ಲಾ ಶಾಖೆಯ ನಿರ್ದೇಶಕರು ಪದಾಧಿಕಾರಿಗಳು ಕೇಂದ್ರ ಸಂಘದ ಪದಾಧಿಕಾರಿಗಳು, ಶೈಕ್ಷಣಿಕ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ತಾಲೂಕ ಅಧ್ಯಕ್ಷರು, ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ನಿರ್ದೇಶಕರು ಸಮಸ್ತ ಸರ್ಕಾರಿ ನೌಕರ ಬಾಂಧವರು
ಎರಡನೇ ದಿನದ ಕಾರ್ಯಕ್ರಮದಲ್ಲಿ ಹಾಜರಿದ್ದು ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದರು.

ಈ ಕ್ರೀಡಾಕೂಟಕ್ಕೆ ಮೆಚ್ಚಿನ ಮಾನ್ಯ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಅವರು ಹಾಗೂ ಕೇಂದ್ರ ಸಂಘದ ಪದಾಧಿಕಾರಿಗಳು, ಅವರು ಇವರು ಅನ್ನದೇ ಎಲ್ಲರೂ ಸಂಪೂರ್ಣ ಸಹಕಾರ ನೀಡಿದ್ದಕ್ಕಾಗಿ ಈ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಜರುಗಿದೆ..

ವರದಿ ಪ್ರಕಾಶ ಕುರಗುಂದ..