ರಾಜ್ಯದ ಜನತೆಗೆ ಬೆಲೆ ಏರಿಕೆಯ ಬರೆ ಹಾಕಿದ ಕಾಂಗ್ರೆಸ್ ಸರ್ಕಾರ..
ಬೆಳಗಾವಿ ಜಿಲ್ಲಾ ಗ್ರಾಮೀಣ ಬಿಜೆಪಿ ಘಟಕದಿಂದ ಬ್ರಹತ್ ಪ್ರತಿಭಟನೆ..
ಬೆಳಗಾವಿ : ಸೋಮವಾರ ದಿನಾಂಕ 17/06/2024ರಂದು ಭಾರತೀಯ ಜನತಾ ಪಾರ್ಟಿ ವತಿಯಿಂದ ಬೆಳಗಾವಿ ನಗರದ ರಾಣಿ ಚೆನ್ನಮ್ಮ ಸರ್ಕಲ್ ಹತ್ತಿರ ರಸ್ತೆ ತಡೆ ಮಾಡಿ, ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆಯ ನೀತಿಯ ವಿರುದ್ಧ ಬೃಹತ್ ಪ್ರತಿಭಟನೆ ಮಾಡಲಾಯಿತು..
ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿರುವ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದಾರೆ.

ಆದೇಶ ಹೊರಡಿಸಿದ ಸಿಎಂ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದ್ದಾರೆ.
ಕರ್ನಾಟಕದಲ್ಲಿ ಸ್ಟ್ಯಾಂಪ್ ಡ್ಯುಟಿ 20 ರಿಂದ 120 ಶೇಕಡಾ ಏರಿಕೆಯಾಗಿದೆ, ಖಾಸಗಿ ಕಾಲೇಜು ಬಿಇ ಶುಲ್ಕ 10% ರಷ್ಟು ಏರಿಕೆ,
ಹಾಲಿನ ದರ ಪ್ರತಿ ಲೀಟರಿಗೆ 3ರೂ. ಏರಿಕೆ,
ಕರ್ನಾಟಕದ ಬಿಜೆಪಿ ಸರ್ಕಾರದಲ್ಲಿ ಪರ್ ಯೂನಿಟ್ 7.60ಪೈಸೆ ವಾಣಿಜ್ಯ ವಿದ್ಯುತ್ ಬೆಲೆ ಇದ್ದಿದ್ದು, ಕಾಂಗ್ರೆಸ್ ಸರ್ಕಾರ ಬಂದ ನಂತರ ವಾಣಿಜ್ಯ ವಿದ್ಯುತ್ ಬೆಲೆ ಈಗ 8.00 ಪರ್ ಯೂನಿಟ್ ಆಗಿದೆ..

ಈ ಎಲ್ಲಾ ಜನವಿರೋಧಿ ನೀತಿಯ ವಿರುದ್ಧ ಇಂದು ಬಿಜೆಪಿಯ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ..


ಈ ಸಂದರ್ಭದಲ್ಲಿ ಭಾ.ಜ.ಪ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ್, ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಶಾಸಕರಾದ ಅಭಯ್ ಪಾಟೀಲ್, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಶಾಸಕರಾದ ವಿಠಲ್ ಹಲಗೇಕರ, ಮಾಜಿ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಮಾಜಿ ಶಾಸಕರುಗಳಾದ ಸಂಜಯ್ ಪಾಟೀಲ, ಅನಿಲ್ ಬೆನಕೆ, ಮಹಾಂತೇಶ ದೊಡಗೌಡರ, ಮಹಾದೇವಪ್ಪ ಯಾದವಾಡ, ಎಂ.ಬಿ. ಜಿರಲಿ, ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ ಪ್ರಕಾಶ್ ಬಸಪ್ಪ ಕುರಗುಂದ..