ರಾಜ್ಯ ಕಂದಾಯ ಇಲಾಖೆಯ ಉಪಸಮಿತಿ ಸಭೆಯಲ್ಲಿ ಭಾಗಿಯಾದ ಸಚಿವ ಸತೀಶ ಜಾರಕಿಹೊಳಿ..
ಬೆಂಗಳೂರು : ಬುಧವಾರ ವಿಧಾನ ಸೌಧದಲ್ಲಿ ಸಭಾಗೃಹದಲ್ಲಿ ಜರುಗಿದ, ಕಂದಾಯ ಇಲಾಖೆಯ ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲಿ, ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭಾಗಿಯಾಗಿದ್ದರು..

ಸರ್ಕಾರದ ಕೆಲ ಇಲಾಖೆಯ ಸಚಿವರು, ರಾಜ್ಯದ ಪರಿಸ್ಥಿತಿಯ ಮಾಹಿತಿ ಪಡೆದು, ಚರ್ಚೆ ಮಾಡಿ, ಕೆಲ ವಿಚಾರಗಳ ಬಗ್ಗೆ ತೀರ್ಮಾನಿಸಿ, ರಾಜ್ಯದ 195 ತಾಲೂಕುಗಳಲ್ಲಿ ಬರ ಘೋಷಿಸಲು ಸಭೆಯಲ್ಲಿ ಒಮ್ಮತದ ನಿರ್ಣಯ ತಗೆದುಕೊಂಡರು..
ಈ ನಿರ್ಣಯದ ವರದಿಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರಿಗೆ ಶಿಫಾರಸ್ಸು ಮಾಡಲು ಕಂದಾಯ ಇಲಾಖೆ ಸಚಿವರಾದ ಕೃಷ್ಣ ಬೈರೆಗೌಡರ ಅವರ ನೇತೃತ್ವದಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ..

ಈ ಸಂದರ್ಭದಲ್ಲಿ ಸಚಿವರುಗಳಾದ ಎನ್ ಚೆಲುವನಾರಾಯಣ ಸ್ವಾಮಿ, ಕೆ ಎನ್ ರಾಜಣ್ಣ, ಪ್ರಿಯಾಂಕ ಖರ್ಗೆ, ಸೇರಿ ವಿವಿಧ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಪ್ರಕಾಶ ಕುರಗುಂದ..