ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ 2025.
ಶೇಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸಾಧನೆ ಮಾಡಿದ ಜಿಲ್ಲಾಸ್ಪತ್ರೆಯ ದಂತ ವೈದ್ಯೆ ಡಾ, ದೀಪಾ ಮಗದುಮ್..
ಸಿಂಗಲ್ಸ್ ಹಾಗೂ ಡಬಲ್ಸ್ ಅಲ್ಲಿ ಪ್ರಥಮ ಸ್ಥಾನ ಪಡೆದ ಡಾ ದೀಪಾ ಮಗದುಮ್..
ಬೆಳಗಾವಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಎರಡು ದಿನಗಳ ಕಾಲ ಜರುಗಿದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳಗಾವಿಯ ಜಿಲ್ಲಾಸ್ಪತ್ರೆಯ ದಂತ ವೈದ್ಯಕೀಯ ವಿಭಾಗದ ವೈದ್ಯರಾದ ಡಾ ದೀಪಾ ಮಗದುಮ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಎರಡು ದಿನಗಳ ಕಾಲ ನಡೆದ ಈ ಸ್ಪರ್ಧೆಗಳಲ್ಲಿ, ಶೇಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯ ಮಹಿಳಾ ವಿಭಾಗದಲ್ಲಿ ಜಿಲ್ಲೆಯಾದ್ಯಂತ ಸುಮಾರು 12 ಮಹಿಳಾ ಸ್ಪರ್ಧಿಗಳು ಭಾಗಿಯಾಗಿದ್ದರು, ಅದರಲ್ಲಿ ತಮ್ಮ ಚಾಣಾಕ್ಷತನದ ಆಟದಿಂದ ಎಲ್ಲಾ ಸ್ಪರ್ಧಿಗಳನ್ನು ಸೋಲಿಸಿದ ಡಾ ದೀಪಾ ಮಗದುಮ್ ಅವರು 40ವರ್ಷ ಒಳಗಿನ ಸಿಂಗಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ನಂತರ (ಆರೋಗ್ಯ ಇಲಾಖೆಯ) ಜಿಲ್ಲಾಸ್ಪತ್ರೆಯ ಡಾ ದೀಪಾ ಮಗದುಮ್ ಹಾಗೂ ವಿಜಯರಾಣಿ ಅವರು 40 ವಯಸ್ಸಿನ ಮೇಲಿನ ಮತ್ತು ಒಳಗಿನ ಮಹಿಳೆಯರ ಡಬಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿಯೂ ಕೂಡಾ ಪ್ರಥಮ ಸ್ಥಾನ ಪಡೆದಿದ್ದು, ಮುಂದೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಜಿಲ್ಲಾಸ್ಪತ್ರೆಯ ದಂತ ವೈದ್ಯೆ ದೀಪಾ ಮಗದುಮ್ ಅವರ ಈ ಸಾಧನೆ ಬಗ್ಗೆ ಬೆಳಗಾವಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು ಹೆಮ್ಮೆ ಪಟ್ಟಿದ್ದು, ಅಧಿಕಾರಿಗಳು ಸಹ ಸಿಬ್ಬಂದಿಗಳು ಶುಭಾಶಯಗಳನ್ನು ತಿಳಿಸಿದ್ದಾರೆ.
ವರದಿ ಪ್ರಕಾಶ ಬಸಪ್ಪ ಕುರಗುಂದ..