ರೈತರ ವಿವಿಧ ಬೇಡಿಕೆ ಈಡೇರಿಕೆಗಾಗಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ..
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರೈತಪರ ಮನವಿ..
ಬೆಳಗಾವಿ : ಜಿಲ್ಲೆಯಲ್ಲಿ ಬಾಕಿ ಉಳಿದ ರೈತರ ಖಾತೆಗಳಿಗೆ ಬೆಳೆ ಪರಿಹಾರ ಹಣ ಜಮೆ ಮಾಡಿಸಬೇಕು, ರೈತರ ಜಮೀನುಗಳಿಗೆ ಉಚಿತ ಪಂಪಸೆಟ್ ಗಳ ವ್ಯವಸ್ಥೆ, ರೈತರಿಗೆ 3 ಗಂಟೆಗಳ ಕಾಲ ವಿದ್ಯುತ್ ಪೂರೈಕೆ, ಸಂಪೂರ್ಣ ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟಿಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನೆಕಾರರು ರೈತರಿಗೆ ಸರಕಾರ ತಾರತಮ್ಯ ಮಾಡುತ್ತಿದೆ, ಹಿಡಕಲ ಜಲಾಶಯದ ಬಲದಂಡೆ ಮತ್ತು ಎಡದಂಡೆ ಕುಡಿಯುವ ನೀರು ಪೂರೈಕೆ ಜೊತೆಗೆ
ರಾಯಬಾಗ ತಾಲೂಕಿನ ಭಾವನ ಸವದತ್ತಿ ಏತ ನೀರಾವರಿ ಕಾಮಗಾರಿ ಪ್ರಾರಂಭ ಮಾಡಬೇಕೆಂದು ಆಗ್ರಹಿಸಿದರು.

ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಗಣೇಶ ಇಳಿಗೇರ ಮಾತನಾಡಿ ಜಿಲ್ಲಾಧಿಕಾರಿಗಳು ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಆಶ್ವಾಸನೆ ಕೊಟ್ಟಿದ್ದಾರೆ. ಅದರಂತೆ ನಡೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಮತ್ತು ರೈತರ ಮೇಲೆ ಉಚಿತವಾಗಿ ನೀಡುವ ವಿದ್ಯುತ್ ಟಿಸಿ ಮೇಲೆ ಹಣ ವಸೂಲಿ ಮಾಡುತ್ತಿದ್ದಾರೆ ಇದನ್ನು ತಕ್ಷಣ ನಿಲ್ಲಿಸಬೇಕೆಂದರು.
ಪ್ರತಿಭಟನೆಯಲ್ಲಿ ರೈತರಾದ ಸತ್ಯಪ್ಪ ಮಲ್ಲಾಪುರ, ಮಾಂತೇಶ ಕಡರಟ್ಟಿ, ಗೋಪಾಲ ವಾಲಿಕಾರ, ಅರ್ಜುನ ಮಲಕನ್ನವರ, ಕಲ್ಲಪ್ಪ ಕಿತ್ತೂರ ಸಿದ್ದಪ್ಪ ಕಿತ್ತೂರ ಸೇರಿದಂತೆ ಇತರರು ಇದ್ದರು.
ವರದಿ ಪ್ರಕಾಶ್ ಬಸಪ್ಪ ಕುರಗುಂದ..