ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೂಡಿ ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತೇವೆ.
ಪಂಚರಾಜ್ಯಗಳ ಪಲಿತಾಂಶ, ಲೋಕಸಭಾ ಚುನಾವಣೆಯ ಮುನ್ಸೂಚನೆ..!!!
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ಪಷ್ಟನೆ..
ಬೆಳಗಾವಿ : ಚಳಿಗಾಲ ಅಧಿವೇಶನ ನಿಮಿತ್ತ ಮೊದಲ ದಿನ ಸದನಕ್ಕೆ ಆಗಮಿಸಿದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಜೆಡಿಎಸ್ ಪಕ್ಷದ ಜೊತೆಗೂಡಿ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು..
ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಅವಧಿಗೂ ದೇಶದ ಪ್ರಧಾನಿಯಾಗಿ ಮುಂದುವರೆಯುವದರಲ್ಲಿ ಯಾವುದೇ ಸಂಶಯವಿಲ್ಲ, ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು..

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯ ಬಲ ಹಾಗೂ ಪ್ರಧಾನಿ ಮೋದಿಯವರ ಪ್ರಭಾವ ಹೇಗೆ ಇದೆ ಎಂದು ದೇಶವಾಸಿಗಳು ಸಾಬೀತು ಮಾಡಿದ್ದಾರೆ, ದೇಶದ ಸುರಕ್ಷತೆ ದೃಷ್ಠಿಯಲ್ಲಿ ಮೊದಿಜಿಯವರ ಆಡಳಿತ ತುಂಬಾ ಅಬ್ಯಾಶ್ಯಕವಿದೆ ಎಂದರು..
ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲಾ, ಸಣ್ಣ ಪುಟ್ಟ ಕೆಲ ಮನಸ್ಥಾಪಗಳಿದ್ದರೆ, ಮಾತುಕತೆ ಮೂಲಕ ಬಗೆಹರಿಸಿಕೊಂಡು, ಬರುವ ದಿನಗಳಲ್ಲಿ ಮಹತ್ತರ ಹೆಜ್ಜೆಯನ್ನು ಪಕ್ಷ ಇಡಲಿದೆ ಎಂದರು..
ವರದಿ ಪ್ರಕಾಶ ಕುರಗುಂದ..