ವಂದೇ ಮಾತರಂ ಪೂರ್ಣರೂಪ ಪಾಲನೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ..
ಬೆಳಗಾವಿ : ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣಗಳಿಗೆ ಸೀಮಿತಗೊಳಿಸಿ ಹಾಡುವಂತೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಖಂಡಿಸಿ, ಗೀತೆಯ ಪೂರ್ಣರೂಪವನ್ನು ಗೌರವಪೂರ್ವಕವಾಗಿ ಪಾಲಿಸುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಕಾರ್ಯಕರ್ತರು ನಗರದ ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಶುಕ್ರವಾರ ನಗರದ ಸಾಹಿತ್ಯಭವನದಲ್ಲಿ ನೂರಾರು ಕಾರ್ಯಕರ್ತರು, ಮುಖಂಡರು ಹಾಲಿ, ಮಾಜಿ ಶಾಸಕರು, ಜಮಾವಣೆಗೊಂಡು ಕಾಂಗ್ರೆಸ್ ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ್ ವ್ಯಕ್ತಪಡಿಸಿದರು.
ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟಿಸಿ ರ್ಯಾಲಿ ಮೂಲಕ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ವೆಂದೇ ಮಾತರಂ ಪೂರ್ಣ ಗೀತೆ ಹಾಡಿದ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಇದೇ ವೇಳೆ ಬಿಜೆಪಿ ಮುಖಂಡ ನ್ಯಾಯವಾದಿ ಎಂ.ಬಿ. ಜರಳಿ ಮಾತನಾಡಿ,
ಸೆ.15ರಿಂದ ಐದು ದಿನಗಳ ಕಾಲ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಿ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ವಂದೇ ಮಾತರಂ ಪೂರ್ಣ ಗೀತೆ ಹಾಡಲಾಗುವುದು ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಸಿದರು.
ವಂದೇ ಮಾತರಂ ಕೇವಲ ಗೀತೆಯಲ್ಲ; ಅದು ಸ್ವಾತಂತ್ರ್ಯ ಹೋರಾಟ, ತ್ಯಾಗ ಮತ್ತು ರಾಷ್ಟ್ರಭಕ್ತಿಯ ಪ್ರತೀಕವಾಗಿದೆ. ಐತಿಹಾಸಿಕ ಗೀತೆಯನ್ನು ಮೊಟಕುಗೊಳಿಸುವುದು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ ಎಂದು ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಅಸಮಾಧಾನ ಹೋರ ಹಾಕಿದರು.
ವಂದೇ ಮಾತರಂಗೆ ಸಂಬಂಧಿಸಿದ ಸರ್ಕಾರದ ಆದೇಶವನ್ನು ಮರುಪರಿಶೀಲಿಸಿ, ಪೂರ್ಣರೂಪವನ್ನು ಗೌರವದಿಂದ ಪಾಲಿಸುವಂತೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದರು.
ಈ ವೇಳೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎಂ. ನಾಗರಾಜ್
ಮಾಜಿ ಶಾಸಕ ಸಂಜಯ ಪಾಟೀಲ, ಮಾಜಿ ಶಾಸಕ ಅರವಿಂದ ಪಾಟೀಲ, ಯುವರಾಜ ಜಾಧವ, ಗೀತಾ ಸುತಾರ, ವಿಜಯ ಕೊಡಗನೂರ, ಸುಭಾಸ ಪಾಟೀಲ, ರಾಜಕುಮಾರ ಪಾವಲೆ, ಮುರುಗೇಂದ್ರಗೌಡ ಪಾಟೀಲ, ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.