ವಸತಿ ನಿಲಯಗಳ ವಿಧ್ಯಾರ್ಥಿಗಳಿಗೆ ವೈದ್ಯಕೀಯ ತಪಾಸಣೆ..
ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿಗಳ ಪೂರೈಕೆ..
ವಿಧ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯೇ ನಮ್ಮ ಗುರಿ..
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು..
ಬೆಳಗಾವಿ : ರಾಜ್ಯದ ಬಹುದೊಡ್ಡ ಜಿಲ್ಲೆಗಳ ಸಾಲಿನಲ್ಲಿ ಬೆಳಗಾವಿ ಕೂಡಾ ಪ್ರಮುಖವಾಗಿದ್ದು, ಭೌಗೋಳಿಕ, ರಾಜಕೀಯ, ಆರ್ಥಿಕ ಹಾಗೂ ಆಡಳಿತಾತ್ಮಕವಾಗಿ ತನ್ನದೇ ಆದ ವಿಶೇಷತೆ ಹಾಗೂ ಕೊಡುಗೆಯೊಂದಿಗೆ ರಾಜ್ಯದ ಎರಡನೇ ರಾಜಧಾನಿ ಎಂದು ಹೆಸರುವಾಸಿಯಾಗಿದೆ..
ಇಂತಹ ಪ್ರಭಾವಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯೂ ಕೂಡಾ ತನ್ನದೇ ಆದ ವಿಶಾಲತೆ ಹೊಂದಿದ್ದು, ಲಕ್ಷಾಂತರ ವಿಧ್ಯಾರ್ಥಿಗಳು ಈ ಇಲಾಖೆಯ ವಸತಿ ನಿಲಯಗಳಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಅಧ್ಯಯನ ಮಾಡಿ ಇಂದು ಸಮಾಜದ ಉನ್ನತ ಸ್ಥಾನದಲ್ಲಿದ್ದರೆ ಈಗಿರುವ ವಿಧ್ಯಾರ್ಥಿಗಳು ಕೂಡಾ ಇಲಾಖೆಯ ಸಿಬ್ಬಂದಿಗಳ ಮಾರ್ಗದರ್ಶನ ಮತ್ತು ಸಹಕಾರದಿಂದ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ದಾರಿಯಲ್ಲಿದ್ದರೆ..

ಪ್ರಸ್ತುತ ಬೆಳಗಾವಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯಾದ ಶಿವಪ್ರಿಯಾ ಕಡೆಚೂರ ಅವರ ಮಾರ್ಗದರ್ಶನದಲ್ಲಿ ಇಲಾಖೆಯ ಸಿಬ್ಬಂದಿಗಳು ವಿಧ್ಯಾರ್ಥಿಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಲಕ್ಷಾಂತರ ವಿಧ್ಯಾರ್ಥಿಗಳ ವಿಧ್ಯಾಭ್ಯಾಸ ಹಾಗೂ ಉತ್ತಮ ಭವಿಷ್ಯಕ್ಕೆ ದಾರಿಯಾಗುತ್ತಿದ್ದಾರೆ.
ಅದರಂತೆ ಮೊನ್ನೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ನೇತೃತ್ವದಲ್ಲಿ ಬೆಳಗಾವಿ ತಾಲ್ಲೂಕಿನಲ್ಲಿರುವ ವಸತಿ ನಿಲಯಗಳಿಗೆ ಬೇಟಿ ನೀಡಿ, ಎಲ್ಲಾ ವಿಧ್ಯಾರ್ಥಿಗಳಿಗೆ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ವಿಧ್ಯಾರ್ಥಿಗಳ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗೆ ಔಷದೋಪಚಾರ ಒದಗಿಸಲಾಗಿದೆ ಎಂಬ ಮಾಹಿತಿಯಿದೆ..
ಇದೇ ವೇಳೆ, ಅತಿಯಾದ ಮಳೆಯಿಂದಾಗಿ ರೋಗಗಳು ಹರಡುವ ಪರಿಸ್ಥಿತಿ ಇರುವದರಿಂದ ಮುಂಜಾಗ್ರತಾ ಕ್ರಮವಾಗಿ ವಿಧ್ಯಾರ್ಥಿಗಳಿಗೆ ಕೆಲ ಸುರಕ್ಷಿತಾ ಪರಿಕರಗಳನ್ನು ಕೂಡಾ ನೀಡಲಾಗಿದೆ.

ವಸತಿ ನಿಲಯಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿಧ್ಯಾರ್ಥಿಗಳು ಅಧ್ಯಯನ ಮಾಡುವುದರಿಂದ, ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲ ಆಗಲೆಂದು ವಿವಿಧ ಸ್ಪರ್ಧಾತ್ಮಕ ಪುಸ್ತಕಗಳನ್ನು ಪೂರೈಕೆ ಮಾಡುವದರ ಜೊತೆಗೆ ಪ್ರಚಲಿತ ವಿದ್ಯಮಾನ ಹಾಗೂ ಸಾಮಾನ್ಯ ಜ್ಞಾನ ವೃದ್ಧಿಸಿಕೊಳ್ಳಲು ಮಾಸಿಕ ಸ್ಪರ್ಧಾತ್ಮಕ ಮ್ಯಾಗಜೀನ್ ಗಳನ್ನೂ ಕೂಡಾ ಪೂರೈಕೆ ಮಾಡಲಾಗಿದೆ..
ಒಟ್ಟಿನಲ್ಲಿ ಇಲಾಖೆಯ ಅಡಿಯಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ವಿಧ್ಯಾರ್ಥಿಗಳಿಗೆ ಗುಣಮಟ್ಟದ ಸೌಲಭ್ಯ ನೀಡುತ್ತಿರುವ ಇಲಾಖೆಯ ಅಧಿಕಾರಿಗಳ ಕಾರ್ಯ ಶ್ಲಾಘನೀಯವಾಗಿದ್ದು, ಜಿಲ್ಲಾ ಕಲ್ಯಾಣಾಧಿಕಾರಿಗಳ ಜೊತೆಗೆ ಬೆಳಗಾವಿಯ ತಾಲೂಕಾಧಿಕಾರುಗಳು, ನಿಲಯಪಾಲಕರು ಹಾಗೂ ಇಲಾಖೆಯ ಸಿಬ್ಬಂದಿಗಳು ಕೂಡಾ ವೈದ್ಯಕೀಯ ತಪಾಸಣಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು..
ವರದಿ ಪ್ರಕಾಶ ಬಸಪ್ಪ ಕುರಗುಂದ.