ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಗಣ್ಯರ ಸಂತಾಪ..
ಬೆಳಗಾವಿ : ಕಾಂಗ್ರೆಸ್ಸಿನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಶಿಕ್ಷಣ, ಸಾಮಾಜಿಕ, ಕೈಗಾರಿಕೆ ಕ್ಷೇತ್ರದಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ್ದಾರೆ. ಅವರ ಅಗಲಿಕೆ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸಂತಾಪ ಸೂಚಿಸಿದ್ದಾರೆ.
ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಶಾಮನೂರು ಶಿವಶಂಕರಪ್ಪ ಬಡವರ ಬಂಧು ಆಗಿ, ಪಕ್ಷಾತೀತವಾಗಿ ಕೆಲಸ ಮಾಡಿದವರು. ರಾಜಕೀಯ ಮುತ್ಸದಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನಮ್ಮನ್ನೆಲ್ಲ ಅಗಲಿದ್ದಾರೆ. ದೇವರು ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಇದೇ ವಿಚಾರವಾಗಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಯತಿಂದ್ರ ಸಿದ್ದರಾಮಯ್ಯ ಅವರು,
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಶಿಕ್ಷಣ, ರಾಜಕೀಯ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದಾರೆ. ಅವರ ನಿಧನದಿಂದ ಪಕ್ಷಕ್ಕೆ ದೊಡ್ಡ ಹಾನಿಯಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.

ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರ, ಸಮಾಜದ ಸಲುವಾಗಿ ಶಾಮನೂರು ಶಿವಶಂಕರಪ್ಪ ಸಾಕಷ್ಟು ಶ್ರಮಿಸಿದ್ದಾರೆ. ಅಜಾತಶತ್ರುವಾಗಿದ್ದ ಅವರು, ದಾವಣಗೆರೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಇಂದಿನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದ ಅವರ ನಿಧನದಿಂದ ನೋವಾಗಿದೆ ಎಂದು ಸಂತಾಪ ಸೂಚಿಸಿದರು.