ಶಾಲಾ ಹೆಣ್ಣು ಮಕ್ಕಳಲ್ಲಿ ಸುರಕ್ಷತೆಯ ತಿಳುವಳಿಕೆ ಇರಲಿ..
ನ್ಯಾಯಾಧೀಶ ಸುಭಾಷ್ ಸಂಕದ.
ಬೆಳಗಾವಿ : ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಿಗೆ ತಮ್ಮ ಸುರಕ್ಷತೆಯ ತಿಳುವಳಿಕೆ ಇರಬೇಕು, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ ಹಾಗೂ ಬಾಲಕಾರ್ಮಿಕತೆ ಕಾಯ್ದೆ ಬಗ್ಗೆ ಮಕ್ಕಳಲ್ಲಿ ಅರಿವು ಇರಬೇಕು ಎಂದು ಬೆಳಗಾವಿ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸುಭಾಷ ಸಂಕದ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಬೆಳಗಾವಿಯ ಶ್ರೀಮತಿ ಉಷಾತಾಯಿ ಗೋಗಟೆ ಹೆಣ್ಣು ಮಕ್ಕಳ ಪ್ರೌಢ ಶಾಲೆಯಲ್ಲಿ ಶನಿವಾರ ಏಳು ಮಾರ್ಚ್ ರಂದು ಆಯೋಜಿಸಿದ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ ಹಾಗೂ ಬಾಲ ಕಾರ್ಮಿಕತೆ ಕಾಯ್ದೆಯ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಉಪಸ್ಥಿತರಿದ್ದ ಶ್ರೀಯುತರು ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ಬಾಲ್ಯ ವಿವಾಹ ಮಾಡಿದರೆ ಶಿಕ್ಷಣದಿಂದ ವಂಚಿತರಾಗುತ್ತಾರೆ, ಮನಸು ಮತ್ತು ದೇಹ ಕುಂಠಿತವಾಗುತ್ತದೆ ಅದರಿಂದ ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಮಾಡಿ ಸ್ವಾವಲಂಬಿ ಆಗಬೇಕೆಂದು ಸಲಹೆ ನೀಡಿದರು.

ಇದೆ ವೇಳೆ ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವಿ ಭಜಂತ್ರಿ ಅವರು ಮಾತನಾಡಿ ಮಕ್ಕಳ ಸಹಾಯವಾಣಿ ಬಗ್ಗೆ ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯರಾದ ಎಂ ಕೆ ಮಾದಾರ ಅವರು ಎಲ್ಲರನ್ನೂ ಸ್ವಾಗತಿಸಿದರು, ವಿ ಜಿ ಕುಲಕರ್ಣಿ ವಂದಿಸಿದರು, ಸುಲೋಚನಾ ಐವಾಳೆ ನಿರೂಪಿಸಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಎಸ್ಎಲ್ ನೆರೆವಾಡಕರ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರು ಉಪಸ್ಥಿತರಿದ್ದರು..