ಶಿಂದೊಳ್ಳಿಯ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ.

ಶಿಂದೊಳ್ಳಿಯ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ.

ಬೆಳಗಾವಿ : ತಾಲೂಕಿನ ಶಿಂದೊಳ್ಳಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳ ವಿವಿಧ ಗುಂಪುಗಳಿಂದ ಆಕರ್ಷಕ ಕವಾಯಿತ್ (ಮಾರ್ಚ್ ಫಾಸ್ಟ್) ನಡೆಯಿತು, ಕಲರ್ ಕಲರ್ ಟೋಪಿ ಧರಿಸಿ ಭಾಗವಹಿಸಿದ ವಿದ್ಯಾರ್ಥಿಗಳು ವೇದಿಕೆಯ ಮೇಲೆ ಸೇರಿದ ಗಣ್ಯರಿಗೆ ಸೆಲ್ಯೂಟ್ ಮಾಡುತ್ತ ಗೌರವ ವಂದನೆ ಸಲ್ಲಿಸಿದರು.

ನಂತರ ವೇದಿಕೆಯ ಮೇಲಿದ್ದ ಗಣ್ಯ ಮಾನ್ಯರು ಮಾತನಾಡಿ ಎಲ್ಲಾ ಮಕ್ಕಳಲ್ಲಿ ಕ್ರೀಡಾ ಸ್ಫೂರ್ತಿ ಇರಬೇಕು, ಎಲ್ಲರೂ ಕ್ರೀಡೆಯಲ್ಲಿ ಭಾಗವಹಿಸಬೇಕು, ಸುರಕ್ಷತೆಯಿಂದ ಎಲ್ಲಾ ಸ್ಪರ್ಧೆಗಳು ನಡೆಯಲಿ, ಕ್ರೀಡಾ ಚಟುವಟಿಕೆಗಳಿಂದಾಗಿ ನಮ್ಮ ಶರೀರ ದಷ್ಟಪುಷ್ಟವಾಗಿ ಇರಲು ಸಾದ್ಯ, ಪಾಠದ ಜೊತೆ ಜೊತೆಗೆ ಆಟವೂ ಇರಲೇಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ. ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ದಾನಿಗಳು ಹಾಗೂ ಊರಿನ ಹಿರಿಯರು, ಶಾಲಾ ಪ್ರಧಾನ ಗುರುಗಳು, ಶಿಕ್ಷಕರು ಹಾಗೂ ಶಿಕ್ಷಕಿಯರು, ವಿದ್ಯಾರ್ಥಿ, ವಿಧ್ಯಾರ್ಥಿನಿಯರು, ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.