ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆ..
26/09/2024 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ..
ಬೆಳಗಾವಿ : ರಾಜ್ಯ ಸರ್ಕಾರದ ಆದೇಶದ ಮೇರೆಗೆ ದಿನಾಂಕ 17/10/2024ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಸಲುವಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿದೆ..
ಈ ಮೊದಲು 27/09/2024ರಂದು ಬೆಳಗಾವಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಯಂತಿಯ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು, ಆದರೆ ಕಾರಣಾಂತರಗಳಿಂದ ಒಂದು ದಿನ ಮುಂಚಿತವಾಗಿಯೇ ಅಂದರೆ 26/09/2024ರಂದು ಮುಂಜಾನೆ 10-30ಕ್ಕೆ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಎರಡನೇ ಮಹಡಿಯ ಸಭಾ ಭವನದಲ್ಲಿ ನಿಗದಿ ಮಾಡಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಚೇರಿಯಿಂದ ಮಾಹಿತಿ ನೀಡಿದ್ದಾರೆ..
ಕಾರಣ ಇದೇ ತಿಂಗಳು ಗುರುವಾರ ದಿನಾಂಕ 26/09/2024 ರಂದು ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಗೆ ಸಮಾಜದ ಪ್ರಮುಖರು, ಸಂಘಟಕರು, ವಿವಿಧ ಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯದ ಹಿತಚಿಂತಕರು ಹಾಜರಾಗಿ ಜಯಂತಿಯ ಆಚರಣೆ ಕುರಿತು ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಪರಿಶಿಷ್ಟ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿಗಳಾದ ಬಸವರಾಜ ಕುರಿಹುಲಿ ಅವರು ಕೊರಿಕೊಂಡಿದ್ದಾರೆ..
ವರದಿ ಪ್ರಕಾಶ್ ಬಸಪ್ಪ ಕುರಗುಂದ..