ಸಚಿವ ಸತೀಶ್ ಜಾರಕಿಹೊಳಿ ನಿರ್ದೇಶನದ ಮೇರೆಗೆ ಬಲರಾಮ ಮಾಸೆನಟ್ಟಿಗೆ ಸ್ಥಾನ..
ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾ ಖಜಾಂಚಿಯಾಗಿ ನೇಮಕ.
ಬೆಳಗಾವಿ : ಕೆಪಿಸಿಸಿಯ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯಕುಮಾರ ಸೊರಕೆ ಅವರ ಅನುಮೋದನೆ ಮೇರೆಗೆ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಸೂಚನೆಯ ಮೇರೆಗೆ ಬಲರಾಮ ಮಾಸೆನಟ್ಟಿ ಅವರನ್ನು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾ ಖಜಾಂಚಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ಸಿನ ಪ್ರಭಾವಿ ನಾಯಕರಾದ ಸಚಿವ ಸತೀಶ್ ಜಾರಕಿಹೊಳಿ ಅವರ ಅನುಯಾಯಿಯಾದ ಬಲರಾಮ ಮಾಸೆನಟ್ಟಿ ಅವರು ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಪಕ್ಷಕ್ಕಾಗಿ ದುಡಿದಿದ್ದಾರೆ. ಬರುವ ದಿನಗಳಲ್ಲಿ ಪಕ್ಷದ ಪ್ರಮುಖರ ಮಾರ್ಗದರ್ಶನದಲ್ಲಿ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಪಕ್ಷವನ್ನು ಬಲವರ್ಧನೆ ಮಾಡುತ್ತಾರೆ ಎಂಬ ನಂಬಿಕೆಯಿಂದ ಒಂದು ಪ್ರಮುಖ ಜವಾಬ್ದಾರಿಯನ್ನು ನೀಡಿದ್ದು, ಇದರಲ್ಲಿ ಯಶಸ್ವಿಯಾಗಲಿ ಎಂದು ಪಕ್ಷದ ಜಿಲ್ಲಾ ಪ್ರಮುಖರು ಶುಭ ಹಾರೈಸಿದ್ದಾರೆ..
ವರದಿ ಪ್ರಕಾಶ್ ಬಿ ಕೆ..