ಸಮಾಜಕಲ್ಯಾಣ ಇಲಾಖೆಯ ವಸತಿ ನಿಲಯ ವಿಧ್ಯಾರ್ಥಿಗಳ ಕ್ರೀಡಾ ಸಾಧನೆ..

ಸಮಾಜಕಲ್ಯಾಣ ಇಲಾಖೆಯ ವಸತಿ ನಿಲಯ ವಿಧ್ಯಾರ್ಥಿಗಳ ಕ್ರೀಡಾ ಸಾಧನೆ..

ಬಾಕ್ಸಿಂಗನಲ್ಲಿ ಜಿಲ್ಲಾ ಮಟ್ಟಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿಧ್ಯಾರ್ಥಿಗಳು..

ಬೆಳಗಾವಿ : ಜಿಲ್ಲಾ ಪಂಚಾಯತ ಬೆಳಗಾವಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ಇವರ ಸಹಯೋಗದಲ್ಲಿ, ಶನಿವಾರ ದಿನಾಂಕ 21/09/2024ರಂದು ನಗರದ ಕ್ರೀಡಾ ವಸತಿ ಶಾಲೆಯಲ್ಲಿ ನಡೆದ ಬೆಳಗಾವಿ ಶೈಕ್ಷಣಿಕ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟ 2024-25 ರಲ್ಲಿ ವಸತಿ ನಿಲಯದ ವಿಧ್ಯಾರ್ಥಿಗಳ ಸಾಧನೆ ಪ್ರಶಂಸನೀಯವಾಗಿದೆ..

ಈ ಜಿಲ್ಲಾ ಮಟ್ಟದ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಬೆಳಗಾವಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿಧ್ಯಾರ್ಥಿಗಳು ಮಹತ್ತರ ಸಾಧನೆ ಮಾಡಿದ್ದು, ಈ ಮೂಲಕ ವಸತಿ ನಿಲಯಕ್ಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಉತ್ತಮ ಹೆಸರು ತಂದಿದ್ದಾರೆ..

ಬಾಕ್ಸಿಂಗ್ ಸ್ಪರ್ಧೆಯಲ್ಲಿ ಸುದೀಪ್ ಮಸೂತಿ ಎಂಬ ಹತ್ತನೇ ತರಗತಿ ಅಧ್ಯಯನ ಮಾಡುತ್ತಿರುವ ವಿಧ್ಯಾರ್ಥಿ 52-54 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದಿದ್ದಾನೆ..

ಇನ್ನು 54-57ಕೆಜಿಯ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಸುಪ್ರೀತ್ ಮಸೂತಿ ಎಂಬ ವಿದ್ಯಾರ್ಥಿ ದ್ವಿತೀಯ ಸ್ಥಾನ ಹಾಗೂ 28-30ಕೆಜಿಯ ವಿಭಾಗದಲ್ಲಿ ಭೀಮರಾವ್ ಮಸೂತಿ ಎಂಬ ವಿಧ್ಯಾರ್ಥಿ ದ್ವೀತಿಯ ಸ್ಥಾನ ಪಡೆದಿದ್ದು, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಕೀರ್ತಿ ತಂದು ಇತರೆ ವಿಧ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ..

ವಿಧ್ಯಾರ್ಥಿಗಳ ಈ ಸಾಧನೆಯ ಬಗ್ಗೆ ನೀಲಯಪಾಲಕರು ಹರ್ಷ ವ್ಯಕ್ತಪಡಿಸಿದ್ದು, ಅವರ ಮುಂದಿನ ಸಾಧನೆಗೆ ಶುಭ ಕೋರಿದ್ದಾರೆ, ರಾಜ್ಯ ಮಟ್ಟದಲ್ಲಿಯೂ ಇದೇ ರೀತಿಯ ಪ್ರದರ್ಶನ ನೀಡಿ, ಯಶಸ್ವಿಯಾಗಿ ಬರಲಿ ಎಂದು ಹಾರೈಸಿದ್ದಾರೆ..

ವರದಿ ಪ್ರಕಾಶ್ ಬಸಪ್ಪ ಕುರಗುಂದ..